ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೇ ಪೂರಕವಾಗಿ, ಜಿಲ್ಲೆಯಲ್ಲಿ 19 ಮಂದಿಯನ್ನು ಗಡಿಪಾರು ಮಾಡುವ ಆದೇಶವನ್ನು ಹೊರಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ತಿಳಿಸಿದ್ದಾರೆ.
ಇದುವರೆಗೂ 50 ಮಂದಿ ಯನ್ನು ಗಡಿಪಾರು ಮಾಡಬೇಕೆಂದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಈ ಎಲ್ಲ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು ಅವರು ಇರುವಂತಹ ಪ್ರದೇಶಗಳಲ್ಲಿ ಶಾಂತಿಯುತ ಮತದಾನಕ್ಕೆ ಅಡ್ಡಿ ಉಂಟಾಗಬಹುದು ಎಂಬ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಗಡಿಪಾರು ಮಾಡಲಾಗಿರುವಂತಹ ವ್ಯಕ್ತಿಗಳ ಕುರಿತು ನಿರಂತರವಾಗಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಪರಿಶೀಲನೆಯನ್ನು ನಡೆಸುತ್ತಿರುತ್ತಾರೆ. ಅಕಸ್ಮಾತ್ ಅವರು ವಾಪಸ್ ಆ ಸ್ಥಳಗಳಿಗೆ ಬಂದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಿರಲಿ ಎಂಬ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296