ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರನ್ನು ಹತ್ಯೆ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಕರ್ನಾಟಕ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ರಂಜಿತ್ ಆರ್ ಎಂ ಎಂದು ಗುರುತಿಸಲಾಗಿದ್ದು, ಜಯನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಆರೋಪಿಗಳು ಸೋಷಿಯಲ್ ಮೀಡಿಯಾದಲ್ಲಿ “ಡಿಕೆ ಸಹೋದರರನ್ನು ಕೊಲ್ಲಿ’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಹಾಕಿದ್ದ ಎನ್ನಲಾಗಿದೆ.
ಆರೋಪಿ ರಂಜಿತ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ತನ್ನನ್ನು ತಾನು ಸೈಬರ್ ಕ್ರೈಂ ಡಿಟೆಕ್ಟಿವ್ ಅಟ್ ಬೆಂಗಳೂರು ಸಿಟಿ ಪೊಲೀಸ್ ಎಂದು ಡೀಟೇಲ್ಸ್ ಹಾಕಿಕೊಂಡಿದ್ದನು.
ಈತ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಸಹೋದರರ ಬಗ್ಗೆ, ಕಾಂಗ್ರೇಸ್ ಪಕ್ಷ ಮುಸಲ್ಮಾನರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದನು.


