ತುಮಕೂರು : ಪ್ರಜಾಸೇವೆ ಆಂದೋಲನದಡಿ ಸ್ವೀಕೃತವಾಗಿರುವ ಸಾರ್ವಜನಿಕ ಕುಂದುಕೊರತೆಗಳು ಹಾಗೂ ಬಾಕಿ ಅರ್ಜಿಗಳನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ವಿಲೇವಾರಿ ಮಾಡುವುದರ ಜತೆಗೆ, ಗುಣಮಟ್ಟದ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಜಾಸೇವೆ ಆಂದೋಲನ ಹಾಗೂ ಗುಣಮಟ್ಟದ ವಿಶ್ಲೇಷಣೆ ಕುರಿತು ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗಿರುವ ಕುಂದುಕೊರತೆಗಳು, ಬಾಕಿ ಇರುವ ಅರ್ಜಿಗಳು ಹಾಗೂ ವಿವಿಧ ಇಲಾಖೆಗಳ ವಿಲೇವಾರಿ ಪ್ರಗತಿಯನ್ನು ಪರಿಶೀಲಿಸಲಾಯಿತು.
ಅರ್ಜಿಗಳನ್ನು ಕೇವಲ ವಿಲೇವಾರಿ ಮಾಡಿದರೆ ಸಾಲದು. ಸಂಬಂಧಪಟ್ಟ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಸಮರ್ಪಕ ಪರಿಹಾರ ಕಲ್ಪಿಸಬೇಕು. ಅರ್ಜಿಗಳ ವಿಲೇವಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಯಾವುದೇ ವಿಳಂಬ ಮಾಡಬಾರದು. ಇಲಾಖಾವಾರು ಬಾಕಿ ಪ್ರಕರಣಗಳ ಮೇಲೆ ನಿರಂತರ ನಿಗಾ ವಹಿಸಿ, ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಪೂರ್ಣಗೊಳಿಸಬೇಕು. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಬಾಕಿ ಪ್ರಕರಣಗಳ ಜವಾಬ್ದಾರಿ ವಹಿಸಿಕೊಂಡು, ವಿಲೇವಾರಿ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಸೂಚಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
