ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಥರಟಿ ಗ್ರಾಮದ ಸರ್ವೆ ನಂ.76/4ರಲ್ಲಿರುವ ತಿಮ್ಮಕ್ಕ ಅವರ ಜಮೀನಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭೇಟಿ ನೀಡಿ ಬೆಳೆಗಳ ಸ್ಥಿತಿ–ಗತಿಯನ್ನು ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಇತರ ಕೃಷಿ ಉಪಕರಣಗಳ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ ಅವರಿಗೆ ಸೂಚನೆ ನೀಡಿದರು.
ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ ಮಾತನಾಡಿ, 2025ನೇ ಸಾಲಿನಲ್ಲಿ ಕೊರಟಗೆರೆ ತಾಲೂಕಿನಲ್ಲಿ ಇದುವರೆಗೆ ಒಟ್ಟು 3748 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯಗಳು ನಡೆದಿದ್ದು, ಶೇಂಗಾ, ರಾಗಿ ಹಾಗೂ ಜೋಳ ಬೆಳೆಗಳು ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಗೊಂಡಿವೆ ಎಂದು ಮಾಹಿತಿ ನೀಡಿದರು.
ತಾಲೂಕಿನಲ್ಲಿ 3071 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ಈವರೆಗೂ 1210 ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ. ಪ್ರಸ್ತುತ 1861 ಮೆಟ್ರಿಕ್ ಟನ್ ಲಭ್ಯವಿದ್ದು, ರೈತರಿಗೆ ಯಾವುದೇ ರಸಗೊಬ್ಬರದ ಕೊರತೆ ಉಂಟಾಗುವುದಿಲ್ಲ. ತಾಲೂಕಿನಲ್ಲಿರುವ ನಾಲ್ಕು ರೈತ ಸಂಪರ್ಕ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜಗಳ ದಾಸ್ತಾನು ಇದೆ ಎಂದು ತಿಳಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC