nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
    ಮಧುಗಿರಿ November 22, 2025

    ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ

    By adminNovember 22, 2025No Comments2 Mins Read
    b veerappa

    ಮಧುಗಿರಿ: ಉಪ ಲೋಕಾಯುಕ್ತ ಬಿ.ವೀರಪ್ಪ ಶುಕ್ರವಾರ ಪಟ್ಟಣಕ್ಕೆ ಭೇಟಿ ನೀಡಿ ಅವ್ಯವಸ್ಥೆ ಕಂಡು ಆಕ್ರೋಶ ವ್ಯಕ್ತಪಡಿಸಿದರು.

    ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಚರಂಡಿ ಒಳಗೆ ಹೂಳು ತುಂಬಿಕೊಂಡಿದೆ. ಅದನ್ನು ಸ್ವಚ್ಛಗೊಳಿಸದೆ ಮೇಲ್ಬಾಗದಲ್ಲಿ ಬೀಚಿಂಗ್ ಪೌಡರ್ ಹಾಕಲಾಗಿದೆ. ನಿತ್ಯ ಇದೇ ರೀತಿ ಬೀಚಿಂಗ್ ಪೌಡರ್ ಸಿಂಪಡಿಸುತ್ತೀರಾ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.


    Provided by
    Provided by

    ನಿತ್ಯ ಸಾವಿರಾರು ಮಂದಿ ಪ್ರಯಾಣಿಕರು ಬಂದು ಹೋಗುವ ಸ್ಥಳದಲ್ಲಿ ನಾಗರಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಂತಾಗಿದೆ. ಏಕೆ ನೀರಿನ ವ್ಯವಸ್ಥೆ ಮಾಡಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದಾಗ ಇನ್ನೊಂದು ತಿಂಗಳಲ್ಲಿ ಕುಡಿಯುವ ನೀರಿನ ಘಟಕದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

    ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರೂ, ನಿಯಂತ್ರಣಕ್ಕೆ ಪುರಸಭೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದಾಗ, ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಂದ ಸರಿಯಾದ ಉತ್ತರ ಬಾರದ ಕಾರಣ ‘ನಿನ್ನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುತ್ತೇನೆ’ ಎಂದರು.

    ಬಸ್‌ ನಿಲ್ದಾಣಕ್ಕೆ ಬಂದ ಉಪ ಲೋಕಾಯುಕ್ತರು, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ತುಮಕೂರು ಕಾಲೇಜಿಗೆ ತೆರಳಲು ಬಸ್‌ ಗಳ ಸಮಸ್ಯೆ ಇದೆ ಎಂದಾಗ, ತಕ್ಷಣ ಬಸ್ ವ್ಯವಸ್ಥೆ ಮಾಡಿ ವಿದ್ಯಾರ್ಥಿಗಳನ್ನು ತುಮಕೂರಿಗೆ ಕಳುಹಿಸಿಕೊಟ್ಟರು.

    ಕೆಎಸ್‌ ಆರ್‌ ಟಿಸಿ ಡಿಪೊ ವ್ಯವಸ್ಥಾಪಕರಿಗೆ ಮಕ್ಕಳಿಗೆ ತೊಂದರೆಯಾಗದಂತೆ ಬಸ್ ಕಲ್ಪಿಸಬೇಕು ಎಂದು ಸೂಚಿಸಿದರು.  ಎಆರ್‌ ಟಿಒ ಕಚೇರಿಗೆ ಭೇಟಿ ನೀಡಿಪರಿಶೀಲನೆ ನಡೆಸಿ  ಮಾಹಿತಿ ಪಡೆದರು.  ಇದೇ ವೇಳೆ  ಸೂಕ್ತ ಮಾಹಿತಿನೀಡದ ಎಆರ್‌ ಟಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಆರ್‌ ಟಿಒ ವೀರಣ್ಣ ಹಾಗೂ ಕೆಲವು ಅಧಿಕಾರಿಗಳ ಮೊಬೈಲ್, ಯುಪಿಐ ಆ್ಯಪ್‌ ಗಳನ್ನು ಪರಿಶೀಲಿಸಿದರು.

    ಎಪಿಎಂಸಿ ಆವರಣದಲ್ಲಿ ರೈತರಿಗೆ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಮಾಡಬೇಕು. ರೈತರು ಬೆಳೆದ ಬೆಳೆಗಳ ಮಾರಾಟಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಪಿಎಂಸಿ ಅಧಿಕಾರಿಗೆ ಸೂಚಿಸಿದರು.

    ಪಟ್ಟಣದ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ಸಮಸ್ಯೆ ಆಲಿಸಿದರು.  ಲೋಕಾಯುಕ್ತ ಸಂಸ್ಥೆಯ ಉಪನಿಬಂಧಕ ಎನ್.ಅರವಿಂದ್, ಎಸ್.ಪಿ.ಲಕ್ಷ್ಮೀನಾರಾಯಣ, ಹೆಚ್ಚುವರಿ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ, ಜಿ.ಪಂ.ಡಿಎಸ್‌ 2 ಸಂಜೀವಪ್ಪ, ಉಪವಿಭಾಗಾಧಿಕಾರಿ ಗೊಟೋರು ಶಿವಪ್ಪ, ತಹಶೀಲ್ದಾರ್ ಶ್ರೀನಿವಾಸ್, ಡಿವೈಎಸ್‌ಪಿ ಮಂಜುನಾಥ್‌, ತಾ.ಪಂ.ಇಒ ಲಕ್ಷ್ಮಣ್ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಕೊರಟಗೆರೆ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಒಳ ಮೀಸಲಾತಿ ಜಾರಿಗೊಳಿಸದೆ, ಹಳೆಯ ಪದ್ಧತಿಯಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು…

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.