ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆಯ ಆರ್ಭಟ ಮುಂದುವರೆಯುತ್ತಿದ್ದು, ಕಳೆದ 24 ಗಂಟೆಯಲ್ಲಿ 3,37,704 ಕೊರೊನಾ ಪ್ರಕರಣಗಳು ದಾಖಲಾಗಿವೆ.
488 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಗುರುವಾರಕ್ಕೆ ಹೋಲಿಸಿದರೆ, ಕಳೆದ 24 ಗಂಟೆಗಳಲ್ಲಿ ಸುಮಾರು 10 ಸಾವಿರ ಸೋಂಕಿತರು ಕಡಿಮೆ ಪತ್ತೆಯಾಗಿದ್ದಾರೆ.ಇನ್ನು ಕಳೆದ 274 ಗಂಟೆಗಳಲ್ಲಿ 2,42,676 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 10,050ಕ್ಕೆ ಏರಿಕೆ ಕಂಡಿದೆ. ಇತ್ತ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದರೂ, ಈ ಹಿಂದಿನ ಎರಡು ಅಲೆಗಳಿಗೆ ಹೋಲಿಕೆ ಮಾಡಿಕೊಂಡರೇ ಮೂರನೇ ಅಲೆಯ ತೀವ್ರತೆ ಕಡಿಮೆ ಇದೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy