ನಮ್ಮ ತುಮಕೂರು ವರದಿ: ದೇಶದಲ್ಲಿ ಭೀತಿ ಸೃಷ್ಟಿಸುವ ಪ್ರಯತ್ನಗಳು ಮೇಲಿಂದ ಮೇಲೆ ನಡೆಯುತ್ತಿವೆ. ಸಮಾಜವನ್ನು ಒಡೆಯಬೇಕೆನ್ನುವ ದುರುದ್ದೇಶ ಇಲ್ಲಿ ಅಡಗಿದೆ. ಸಮುದಾಯಗಳ ನಡುವೆ ಸೌಹಾರ್ದಯುತ ವಾತಾವರಣ ಸೃಷ್ಟಿಸಲು ಕಾಂಗ್ರೆಸ್ ಸಾಕಷ್ಟು ಕೆಲಸ ಮಾಡಿದೆ. ಈ ಸಮುದಾಯಗಳನ್ನು ಅಭಿವೃದ್ಧಿ ಮಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಅಮಾನಿಕೆರೆಯಲ್ಲಿರುವ ಗಾಜಿನಮನೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಅಲ್ಪಸಂಖ್ಯಾತರ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಅಲ್ಪ ಸಂಖ್ಯಾತ ಸಮುದಾಯಗಳನ್ನು ಅಭಿವೃದ್ಧಿ ಮಾಡಲು ನಮ್ಮ ಪಕ್ಷ ಬದ್ಧವಾಗಿದೆ ಎಂದರು.
ಇತ್ತೀಚೆಗೆ ದೇಶದಲ್ಲಿ ಭೀತಿ ಸೃಷ್ಟಿಸುವ ಪ್ರಯತ್ನಗಳು ಮೇಲಿಂದ ಮೇಲೆ ನಡೆಯುತ್ತಿವೆ. ಸಮಾಜವನ್ನು ಒಡೆಯಬೇಕೆನ್ನುವ ದುರುದ್ದೇಶ ಇದರಲ್ಲಿ ಅಡಗಿದೆ ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್ ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಡಾ. ಸಯ್ಯದ್ ನಾಸೀರ್ ಹುಸೇನ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇನ್ನೂ ರಾಜ್ಯ ರಾಜ್ಯ ಮಡಿವಾಳರ ಸಂಘ ತುಮಕೂರಿನಲ್ಲಿ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಮಡಿವಾಳ ಸಮುದಾಯದ ಆಶಯಗಳನ್ನು ಈಡೇರಿಸಲು ಕಾಂಗ್ರೆಸ್ ಬದ್ಧವಾಗಿದೆ. ಸಮುದಾಯದವರಿಗೆ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶ ನೀಡಲಿದೆ ಎಂದು ಭರವಸೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5