ಭಾರತದಲ್ಲಿ ಹೊಸದಾಗಿ 3,47,254 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 3,85,66,027ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ ತಾಜಾ ಮಾಹಿತಿ ನೀಡಿದೆ.
ಈ ಪೈಕಿ 9,692 ಓಮಿಕ್ರಾನ್ ರೂಪಾಂತರಿ ಪ್ರಕರಣಗಳು ಸೇರಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 20,18,825ಕ್ಕೇರಿದೆ. ಇದು 235 ದಿನಗಳಲ್ಲೇ ಅತ್ಯಕ ಪ್ರಮಾಣವಾಗಿದೆ. ಕಳೆದ 24 ಗಂಟೆಗಳಲ್ಲಿ 703 ಮಂದಿ ಕೋವಿಡ್‍ಗೆ ಬಲಿಯಾಗುವುದರೊಂದಿಗೆ ಒಟ್ಟಾರೆ ಕೋವಿಡ್ ಮರಣಗಳ ಪ್ರಮಾಣ 4,88,396ಕ್ಕೆ ತಲುಪಿದೆ.
ಗುರುವಾರದಿಂದೀಚೆಗೆ ಓಮಿಕ್ರಾನ್ ಪ್ರಕರಣಗಳಲ್ಲಿ ಶೇ.4.36ರಷ್ಟು ಹೆಚ್ಚಳವಾಗಿದೆ ಎಂದು ಸಚಿವಾಲಯ ತಿಳಿಸಿದೆ. ಒಟ್ಟಾರೆ ಸೋಂಕಿನ ಪ್ರಕರಣಗಳಲ್ಲಿ ಶೇ.5.23ರಷ್ಟು ಸಕ್ರಿಯ ಪ್ರಕರಣಗಳಿವೆ.ರಾಷ್ಟ್ರೀಯ ಕೋವಿಡ್-19 ಚೇತರಿಕೆ ಪ್ರಮಾಣ ಶೇ.93.50ಕ್ಕೆ ಇಳಿದಿದೆ ಎಂದು ಸಚಿವಾಲಯ ಹೇಳಿದೆ. ಕಳೆದ ಒಂದು ದಿನದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 94,774ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವಿವರಿಸಿದೆ.
ವರದಿ : ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy