ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಪ್ರತಿದಿನ ಕೋವಿಡ್ ಪ್ರಕರಣಗಳ ಸಂಖ್ಯೆ 2000 ದಾಟಿದೆ. 24 ಗಂಟೆಗಳಲ್ಲಿ 2151 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದು ಐದು ತಿಂಗಳಲ್ಲೇ ಗರಿಷ್ಠ ಪ್ರಮಾಣವಾಗಿದೆ.
ಕೋವಿಡ್ ನಿಂದಾಗಿ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಸಹ ದೃಢಪಡಿಸಲಾಗಿದೆ. ಮಹಾರಾಷ್ಟ್ರದಲ್ಲಿ ಮೂರು, ಕರ್ನಾಟಕದಲ್ಲಿ ಒಬ್ಬರು ಮತ್ತು ಕೇರಳದಲ್ಲಿ ಮೂರು ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಕೋವಿಡ್ ಪಾಸಿಟಿವಿಟಿ ದರವು ಶೇಕಡಾ 1.51 ಆಗಿದೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್ ಸಾವಿನ ಸಂಖ್ಯೆ 5,30,848 ಕ್ಕೆ ತಲುಪಿದೆ. ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.47 ಕೋಟಿ. ಸಕ್ರಿಯ ಪ್ರಕರಣಗಳು ಶೇಕಡಾ 0.03. ಚೇತರಿಕೆ ಪ್ರಮಾಣ 98.78 ಪ್ರತಿಶತ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


