ನವದೆಹಲಿ: ದೆಹಲಿಯಲ್ಲಿ ಎಎಪಿ ಸರ್ಕಾರದ ವಿರುದ್ಧ ವಾತಾವರಣ ಸೃಷ್ಟಿಸುವಲ್ಲಿ ಪಕ್ಷ ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಖಾತೆ ತೆರೆಯಲು ವಿಫಲವಾದ ಬೆನ್ನಲ್ಲೇ, ಜನಾದೇಶವನ್ನು ಒಪ್ಪಿಕೊಂಡ ಖರ್ಗೆ, ರಾಷ್ಟ್ರ ರಾಜಧಾನಿಯನ್ನು ಆಳುವ ಜನಾದೇಶ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಮಾಲಿನ್ಯ, ಯಮುನಾ ಸ್ವಚ್ಛತೆ, ವಿದ್ಯುತ್, ರಸ್ತೆಗಳು, ನೀರು ಮತ್ತು ಅಭಿವೃದ್ಧಿಯ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸುತ್ತದೆ ಮತ್ತು ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿರುತ್ತದೆ ಎಂದು ಹೇಳಿದರು.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ, ಸಾರ್ವಜನಿಕ ಹಿತಾಸಕ್ತಿಗಾಗಿ ಕಾಂಗ್ರೆಸ್, ಆಡಳಿತ ವಿರೋಧಿ ಅಲೆ ಸೃಷ್ಟಿಸಿತು. ಆದರೆ ನಾವು ನಿರೀಕ್ಷಿಸಿದಂತೆ ಸಾರ್ವಜನಿಕರು ನಮಗೆ ಜನಾದೇಶ ನೀಡಲಿಲ್ಲ. ನಾವು ಸಾರ್ವಜನಿಕ ಅಭಿಪ್ರಾಯವನ್ನು ಸ್ವೀಕರಿಸುತ್ತೇವೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4