ಕೊರಟಗೆರೆ: ಕುಡಿಯಲು ನೀರಿಲ್ಲದೆ ಜನರು ಪರದಾಡುತ್ತಿರುವ ಸಂದರ್ಭದಲ್ಲಿ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ನೀರು ನಿರಂತರವಾಗಿ ಪೋಲಾಗುತ್ತಿರುವ ಘಟನೆ ನಡೆದಿದೆ.
ಬೈಚಾಪುರ ಗ್ರಾಮದ ಜನರಿಗೆ ಕುಡಿಯಲು ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲೂ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲೇ ನೀರು ಪೋಲಾಗುತ್ತಿದ್ದು, ಗ್ರಾ.ಪಂ. ಪಿಡಿಓ ಹಾಗೂ ವಾಟರ್ ಮ್ಯಾನ್ ಗೆ ಕುಡಿಯುವ ನೀರಿನ ಬೆಲೆಯೇ ಗೊತ್ತಿಲ್ವ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬರಗಾಲದ ನಡುವೆಯು ನೀರನ್ನು ವ್ಯರ್ಥವಾಗಿ ಹರಿದು ಬಿಟ್ಟಿರುವ ಗ್ರಾಮ ಪಂಚಾಯತ್ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


