ಶಿರಾ: ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಬುಕ್ಕಾಪಟ್ಟಣ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 234 ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮಳೆ ನಡುವೆ ರಸ್ತೆಗೆ ಟಾರು ಹಾಕುವ ಕಾಮಗಾರಿ ನಡೆಸುತ್ತಿದ್ದು ಮಳೆಯಲ್ಲಿ ಟಾರು ರಸ್ತೆಗೆ ಕಚ್ಚುವುದೇ? ಈ ರಸ್ತೆಯ ಗುಣ ಮಟ್ಟ ಹೇಗಿರಬಹುದು ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ.
ಈ ಬಗ್ಗೆ ಪ್ರಶ್ನೆ ಮಾಡಿದಾಗ, ನಾವು ಇನ್ನೂ ಐದು ವರ್ಷ ಮೇಂಟೈನ್ಸ್ ಮಾಡುತ್ತೇವೆ. ಹಾಗಾಗಿ ಏನಾದರೂ ತೊಂದರೆ ಇಲ್ಲ ಎಂದು ರಸ್ತೆ ಕಾಮಗಾರಿ ಅಧಿಕಾರಿಗಳು ಸಾರ್ವಜನಿಕರಿಗೆ ಉಡಾಫೆಯ ಉತ್ತರ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಮಳೆಯ ನಡುವೆಯೂ ರಸ್ತೆಗೆ ಟಾರು ಹಾಕುವುದು ಎಷ್ಟರಮಟ್ಟಿಗೆ ಸರಿ ಹಾಗೂ ಈಗಾಗಲೇ ಟಾರು ಹಾಕಿರುವ ರಸ್ತೆಗಳು ಗುಂಡಿ ಬಿದ್ದಿದ್ದು ಅಪಘಾತಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಮಳೆಯಲ್ಲಿ ನೆನೆದಿರುವ ರಸ್ತೆಗೆ ಹಾಕುತ್ತಿರುವ ಟಾರು ಎಷ್ಟರ ಮಟ್ಟಿಗೆ ಗುಣಮಟ್ಟದಿಂದ ಕೂಡಿರುತ್ತದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಷ್ಟು ಮನವಿ ಮಾಡಿಕೊಂಡರು ಸಹ ಅಧಿಕಾರಿಗಳು ದರ್ಪ ತೋರುತ್ತಿದ್ದು ಇವರಿಗೆ ಚಾಟಿ ಬೀಸುವ ಕೆಲಸ ಜನಪ್ರತಿನಿಧಿಗಳು ಮಾಡಬೇಕಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx