ಖ್ಯಾತ ಕಿರುತೆರೆ ನಟಿ 26 ವರ್ಷದ ವೈಶಾಲಿ ಠಕ್ಕರ್ ಮಧ್ಯಪ್ರದೇಶದ ಇಂದೋರ್ ನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೈಶಾಲಿ ಠಕ್ಕರ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಆಕೆಗೆ ಮಾಜಿ ಪ್ರಿಯಕರ ಕಿರುಕುಳ ನೀಡುತ್ತಿದ್ದು, ಇದರಿಂದ ಒತ್ತಡಕ್ಕೆ ಒಳಗಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವೈಶಾಲಿ ತಮ್ಮ ಹಾಗೂ ತಂದೆಯ ಜೊತೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಈಕೆ ಆತ್ಮಹತ್ಯೆ ಮಾಡಿಕೊಳ್ಳುವಂತ ಪರಿಸ್ಥಿತಿ ಎದುರಿಸುತ್ತಿರುವುದು ಮನೆಯವರ ಗಮನಕ್ಕೆ ಬಂದಿರಲಿಲ್ಲ.
2015ರಲ್ಲಿ ಹೇ ರಿಷ್ತಾ ಕ್ಯಾ ಕೆಹೆತಾ ಹೈ ಧಾರವಾಹಿ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದರು. ಇತ್ತೀಚೆಗೆ ಬಿಗ್ ಬಾಸ್ ಖ್ಯಾತಿಯ ನಿಶಾಂತ್ ಮಲಕಣಿ ಜೊತೆ ರಕ್ಷಾಬಂಧನ್ ನಲ್ಲಿ ಕಾಣಿಸಿಕೊಂಡಿದ್ದರು.
ಉಜ್ಜಿಯಿನಿ ಮೂಲದ ಮಹಿದೂರ್ ನಿವಾಸಿ ಆಗಿರುವ ವೈಶಾಲಿ ಠಕ್ಕರ್, ಚಿತ್ರರಂಗದಲ್ಲಿ ಕಾಣಿಸಿಕೊಳ್ಳಲು ಮುಂಬೈಗೆ ತೆರಳಿದ್ದರು. ನಂತರ ಜೈಪುರಕ್ಕೆ ತೆರಳಿ ನಂತರ ಇಂದೋರ್ ನಲ್ಲಿ ಕಳೆದ ಒಂದು ವರ್ಷದಿಂದ ನೆಲೆಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy