ತುಮಕೂರು: ಮಹಿಳೆಯೊಬ್ಬರನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಮತ್ತೋರ್ವ ಆರೋಪಿ ಸೆರೆಗೆ ಶೋಧ ಮುಂದುವರಿಸಲಾಗಿದೆ ಎಂದು ಎಸ್ಪಿ ಕೆ.ವಿ.ಅಶೋಕ್ ಮಾಹಿತಿ ನೀಡಿದ್ದಾರೆ.
ಜುಲೈ 30ರಂದು ಚಿಕ್ಕನಾಯಕನಹಳ್ಳಿ ತಾಲೂಕಿನ ಅಸ್ಟ್ರೀಹಾಳ್ ಗ್ರಾಮದ ಸಮೀಪದ ತೋಟದ ಮನೆಯ ಬಳಿ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿಯ ದೊಡ್ಡಚೆಂಗಾವಿ ಗ್ರಾಮದ ಲಕ್ಷ್ಮೀದೇವಮ್ಮ ಎಂಬುವರ ಶವ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ ಮಾಡಿ ಬಳಿಕ ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿರುವ ಶಂಕೆ ವ್ಯಕ್ತವಾಗಿತ್ತು.
ಈ ಸಂಬಂಧ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ವಿಶೇಷತನಿಖಾ ತಂಡವನ್ನು ಎಸ್ಪಿ ಅಶೋಕ್ ಅವರು ಎಎಸ್ಪಿಗಳು, ತಿಪಟೂರು ಡಿವೈಎಸ್ಪಿ, ಚಿನಾಹಳ್ಳಿ ವೃತ್ತ ಸಿಪಿಐ ಅವರುಗಳ ನೇತೃತ್ವದಲ್ಲಿ ರಚಿಸಿತ್ತು.
ನಿರಂತರ ತನಿಖೆ ನಡೆಸಿದ ತಂಡವು ಆಗಸ್ಟ್ 23ರಂದು ಪ್ರಮುಖ ಆರೋಪಿ ಗುಬ್ಬಿ ತಾಲೂಕು ಪ್ರಭುವನಹಳ್ಳಿಯ ನಾಗರಾಜು ಎಂಬಾತನನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ತುಮಕೂರು ತಾಲೂಕು ನರುಗನಹಳ್ಳಿಯ ನಾಗರಾಜು ಎಂಬಾತನ ಬಂಧನಕ್ಕೆ ಶೋಧ ಮುಂದುವರಿಸಲಾಗಿದೆ ಎಂದಿದ್ದಾರೆ. ಕೊಲೆಕೃತ್ಯಕ್ಕೆ ಅಕ್ರಮ ಸಂಬಂಧ ಕಾರಣವೆಂದು ತನಿಖೆಯಲ್ಲಿ ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
