ಗುಬ್ಬಿ: ತಾಲೂಕಿನ ನಿಟ್ಟೂರು ಹೋಬಳಿಯ ಸಾಗಸಂದ್ರ ಗ್ರಾಮದ ಶ್ರೀ ಕೆಂಪಮ್ಮ ದೇವಿಯ ದೇವಸ್ಥಾನಕ್ಕೆ ದಲಿತ ಸಮುದಾಯದವರಿಗೆ ಪ್ರವೇಶ ನಿರಾಕರಣೆ ಮಾಡುತ್ತಿರುವ ದೇವಾಲಯದ ಅರ್ಚಕರ ವಿರುದ್ಧ ಕ್ರಮ ವಹಿಸುವಂತೆ ಗುಬ್ಬಿ ತಾಲೂಕು ದಂಡಾಧಿಕಾರಿಗಳಿಗೆ ದಲಿತ ಸೇನೆ ಜಿಲ್ಲಾಧ್ಯಕ್ಷ ಗೂಳೂರು ಸಿದ್ದರಾಜು ಹಾಗೂ ಮುಖಂಡರು ಮನವಿ ಸಲ್ಲಿಸಿದರು.
ತಾಲೂಕು ದಂಡಾಧಿಕಾರಿಗಳಿಗೆ ಭೇಟಿಯಾಗಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಜರಾಯಿ ಇಲಾಖೆಯ ದೇವಾಲಯಗಳಿಗೆ ಎಲ್ಲ ಜನಾಂಗದವರಿಗೂ ಮುಕ್ತ ಪ್ರವೇಶ ಕಲ್ಪಿಸಿದ್ದರೂ ದಲಿತ ಸಮುದಾಯದವರನ್ನು ಪ್ರವೇಶ ನಿರಾಕರಣೆ ಮಾಡುತ್ತಿರುವುದು ಸರಿಯಲ್ಲ. ಸಂವಿಧಾನದಡಿಯಲ್ಲಿ ಎಲ್ಲಾ ಸಾರ್ವಜನಿಕ ಸ್ಥಳಗಳಿಗೆ ಮುಕ್ತ ಪ್ರವೇಶ ಕಲ್ಪಿಸಿದ್ದರೂ ಸಹ ಉದ್ದೇಶಪೂರ್ವಕವಾಗಿ ಅಸ್ಪೃಷ್ಯತೆ ಆಚರಿಸಲಾಗುತ್ತಿದೆ. ಸಾಗಸಂದ್ರ ಗ್ರಾಮದ ಶ್ರೀ ಕೆಂಪಮ್ಮದೇವಿ ದೇವಾಲಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ಇದಾಗಿದೆ ಎಂದರು.
ಇಂದು ತಾಲೂಕು ದಂಡಾಧಿಕಾರಿಗಳಿಗೆ ಘಟನೆ ಕುರಿತು ಮನವಿಯನ್ನು ಸಲ್ಲಿಸಿದ್ದು, ತಾಲ್ಲೂಕು ದಂಡಾಧಿಕಾರಿಗಳು ದಲಿತ ಸಮುದಾಯದವರಿಗೆ ದೇವಾಲಯದಲ್ಲಿ ಆಗಿರುವ ಘಟನೆಯ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದು ದೇವಾಲಯದ ಅರ್ಚಕರ ವಿರುದ್ಧ ಸೂಕ್ತ ಕ್ರಮ ಜರುಗಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದರು.
ವರದಿ: ಮಂಜುನಾಥ್ ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5