ಬೆಂಗಳೂರು: ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಇಂದು ಬೆಂಗಳೂರಿನ ಸೂಲಿಕೆರೆ ಮೈದಾನದಲ್ಲಿ ನಡೆದ ಶಿಕ್ಷಕರ ಕೃತಜ್ಞತೆ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಜನ್ಮ ಇದ್ದರೇ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದರು. ಕೋಮುವಾದಿಗಳ ಜೊತೆ ಹೋಗೊಲ್ಲ. ಅವರ ವಿರುದ್ಧ ಇರುತ್ತೇವೆ ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದಿದ್ದರು. ಆದರೆ ಈಗ ಪಕ್ಷ ಉಳಿಸಿಕೊಳ್ಳಲು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇವೇಗೌಡರು ಅವರ ಕುಟುಂಬದ ರಾಜಕಾರಣ ಉಳಿಯಲು ಏನ್ ಬೇಕಾದ್ರೂ ಮಾಡ್ತಾರೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಬಿಜೆಪಿ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ನಾವು ಏನೇ ತೀರ್ಮಾನ ಮಾಡಿದರೂ ಜನ ಕಣ್ಣು ಮುಚ್ಕೊಂಡು ಬೆಂಬಲಿಸುತ್ತಾರೆ ಅಂದುಕೊಂಡಿದ್ದಾರೆ. ಅವರು ಪ್ರಧಾನಿಯಾಗಿದ್ದವರು ಈ ರೀತಿ ಮಾಡುತ್ತಾರೆ ಎಂದುಕೊಂಡಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


