ಡಿವೈಡರ್‍ಗೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್ ಟ್ರಕ್‍ಗೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ ಏಳು ಜನರು ದುರಂತ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಭರೇಲಿ ಜಿಲ್ಲೆಯಲ್ಲಿ ನಡೆದಿದೆ. ಆರೋಗ್ಯ ತಪಾಸಣೆ ಮಾಡಿಸಿಕೊಂಡು ಇಂದು ಮುಂಜಾನೆ ತಮ್ಮ ಊರಾದ ಫಿಲ್‍ಬಿಟ್‍ಗೆ ಆ್ಯಂಬುಲೆನ್ಸ್‍ನಲ್ಲಿ ಹಿಂದಿರುಗುತ್ತಿದ್ದಾಗ ಲಖನೌ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ.
ಚಾಲಕನ ನಿಯಂತ್ರಣ ಕಳೆದುಕೊಂಡ ಆ್ಯಂಬುಲೆನ್ಸ್ ಮೊದಲು ಡಿವೈಡರ್‍ಗೆ ಡಿಕ್ಕಿ ಹೊಡೆದು ನಂತರ ಎದುರಿಗೆ ಬರುತ್ತಿದ್ದ ಟ್ರಕ್‍ಗೆ ಗುದ್ದಿದೆ. ಪರಿಣಾಮ ಚಾಲಕ ಹಾಗೂ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ ಏಳು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಘಟನೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB