ಬೆಂಗಳೂರು: ದೇವೇಗೌಡರು ಈ ರಾಜ್ಯದ ಪಿತಾಮಹ. ಕರ್ನಾಟಕದ ಆರೂವರೆ ಕೋಟಿ ಜನರ ತಂದೆ. ಆದರೆ, ದೇವೇಗೌಡರ ಹುಟ್ಟು, ಸಾವಿನ ಬಗ್ಗೆ ಮಾತನ್ನಾಡುತ್ತಾರೆ ರಾಜಣ್ಣ ನಿಮಗೆ ಅಪ್ಪ ಇಲ್ಲವಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ.
ದೇವೇಗೌಡರು ಈಗ ಇಬ್ಬರ ಮೇಲೆ ಕೈಹಾಕಿಕೊಂಡು ಹೋಗುತ್ತಿದ್ದಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ ಎಂಬ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಇಬ್ರಾಹಿಂ, ದೇವೇಗೌಡರು ಅಜರಾಮರರು. ದೇವೇಗೌಡರಿಗೆ ಸಾವಿಲ್ಲ ಸೂರ್ಯ, ಚಂದ್ರ ಇರುವವರೆಗೂ ಅವರ ಹೆಸರು ಶಾಶ್ವತವಾಗಿರುತ್ತದೆ ಎಂದು ತಿರುಗೇಟು ನೀಡಿದ್ದಾರೆ.
ದೇವೇಗೌಡರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದವರು. ಕೆ.ಎನ್.ರಾಜಣ್ಣ ತನ್ನ ಹೇಳಿಕೆಗೆ ದೇವೇಗೌಡರ ಮನೆಗೆ ಬಂದು ಕ್ಷಮೆಯಾಚಿಸಬೇಕು ಎಂದು ಸಿಎಂ ಇಬ್ರಾಹಿಂ ಒತ್ತಾಯಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


