ಮಾರ್ಚ್ 26 ರಂದು ನಿಗದಿಯಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ರೋಡ್ ಶೋವನ್ನ ಜೆಡಿಎಸ್ ರದ್ಧುಪಡಿಸಿದೆ.
ಮಾರ್ಚ್ 26 ರಂದು ಕುಂಬಳಗೋಡಿನಿಂದ ಮೈಸೂರಿನವರೆಗೆ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ರೋಡ್ ಶೋ ನಡೆಸಲು ಜೆಡಿಎಸ್ ಮುಂದಾಗಿತ್ತು. ಆದರೆ ಹೆಚ್.ಡಿ ದೇವೇಗೌಡರ ಆರೋಗ್ಯ ದೃಷ್ಠಿಯಿಂದ ವೈದ್ಯರ ಸಲಹೆ ಮೇರೆಗೆ ರೋಡ್ ಶೋವನ್ನು ರದ್ದು ಮಾಡಲಾಗಿದೆ ಎನ್ನಲಾಗಿದೆ.
ರೋಡ್ ಶೋ ರದ್ದಾದರೂ ಸಹ ಮೈಸೂರಿನಲ್ಲಿ 10 ಲಕ್ಷ ಕಾರ್ಯಕರ್ತರನ್ನ ಸೇರಿಸಿ ಸಮಾರೋಪ ಸಮಾರಂಭ ನಡೆಸಲು ಜೆಡಿಎಸ್ ತೀರ್ಮಾನಿಸಿದೆ. ರೋಡ್ ಶೋ ರದ್ದು ಕುರಿತು ಇಂದು ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಚರ್ಚಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


