ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹೆಸರು ಬಹುತೇಕ ಅಂತಿಮವಾಗಿದೆ ಎನ್ನಲಾಗಿದೆ. ಹೊಸ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಇಂದು ಇಲ್ಲವೆ ನಾಳೆ ನಡೆಯಲಿರುವ ಸಭೆಯಲ್ಲಿ ಘೋಷಣೆ ಮಾಡಲಾಗುವುದು ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮುಖ್ಯಮಂತ್ರಿಗಳ ಹೆಸರಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಗಹ ಸಚಿವ ಅಮಿತ್ ಶಾ ಅವರು ತೆಗೆದುಕೊಳ್ಳುವ ನಿರ್ಧಾರವನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ತಿಳಿಸಿದ್ದಾರೆ.
ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬಹುದು ಎಂಬ ಊಹಾಪೋಹಗಳಿವೆ ಮತ್ತು ಶಿವಸೇನೆಯು ಗೃಹ ಖಾತೆಯ ಮೇಲೆ ಹಕ್ಕು ಸಾಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಚುನಾವಣಾ ಫಲಿತಾಂಶಗಳು ಪ್ರಕಟವಾದ ಒಂದು ವಾರದ ನಂತರ, ಮಹಾರಾಷ್ಟ್ರದ ಮುಖ್ಯಮಂತ್ರಿ ಯಾರೆಂದು ಬಿಜೆಪಿ ಅಂತಿಮಗೊಳಿಸಿದೆ, ಶೀಘ್ರದಲ್ಲೇ ಘೋಷಣೆ ಬರಲಿದೆ ಎಂದು ವರದಿಗಳು ಹೇಳಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx