ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದ ಶಿರಾ ರಸ್ತೆಯ ದೇವಗಿರಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜಾ ಕಾರ್ಯಕ್ರಮಗಳು ಶುಕ್ರವಾರ ಅದ್ದೂರಿಯಾಗಿ ಜರುಗಿದವು.
ಭಕ್ತರಿಗೆ ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ಅನುಕೂಲ ಕಲ್ಪಿಸಲಾಗಿದ್ದು, ದೇವಸ್ಥಾನಕ್ಕೆ ಭೇಟಿ ನೀಡಿದ ಭಕ್ತರಿಗೆ ಪ್ರಸಾದ ವಿನಿಯೋಗ ವ್ಯವಸ್ಥೆಯನ್ನೂ ತೃಪ್ತಿಕರವಾಗಿ ನಡೆಸಲಾಯಿತು. ವಿಶೇಷ ಅಲಂಕಾರದೊಂದಿಗೆ ಶ್ರೀ ವೆಂಕಟೇಶ್ವರನಿಗೆ ಪೂಜೆಯನ್ನು ನೆರವೇರಿಸಿದ್ದು, ದೇವರ ಮೂರ್ತಿಯ ಶೋಭೆ ಭಕ್ತರನ್ನು ಆಕರ್ಷಿಸಿತು.
ವೈಕುಂಠ ಏಕಾದಶಿಯ ಪ್ರಯುಕ್ತ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಸ್ವಾಮಿಯ ದರ್ಶನವನ್ನು ಪಡೆದರು. ದೇವಾಲಯದ ಆಡಳಿತ ಮಂಡಳಿಯ ಸಮರ್ಪಕ ವ್ಯವಸ್ಥೆ ಮತ್ತು ಆಧ್ಯಾತ್ಮಿಕ ವಾತಾವರಣ ಭಕ್ತರಿಗೆ ಆನಂದ ನೀಡಿತು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx