nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025
    Facebook Twitter Instagram
    ಟ್ರೆಂಡಿಂಗ್
    • ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
    • ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ
    • ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ
    • ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ
    • ಸಾಲ ಮರುಪಾವತಿ ಮಾಡದ ವ್ಯಕ್ತಿಯನ್ನು ಸರಪಳಿಯಲ್ಲಿ ಕಟ್ಟಿಹಾಕಿ ಟಾರ್ಚರ್!
    • ಕುಟುಂಬ ಗಲಾಟೆ ನಿಲ್ಲಿಸಲು ಬಂದ ಪೇದೆಯಿಂದ ಮಹಿಳೆ ಮೇಲೆ ಅತ್ಯಾಚಾರ!
    • ಗಾಂಜಾ ಬೆರೆಸಿ ಚಾಕೊಲೇಟ್ ಮಾರಾಟ: ಆರೋಪಿಯ ಬಂಧನ
    • ಜುಲೈ 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ದಸರಾ ಉತ್ಸವ: ಬ್ರಾಹ್ಮಿ ಮುಹೂರ್ತದಲ್ಲಿ ದೇವಿ ಪ್ರತಿಷ್ಠಾಪನೆ | ಏನೇನು ವಿಶೇಷಗಳಿರಲಿದೆ, ಇಲ್ಲಿದೆ ಮಾಹಿತಿ
    ತುಮಕೂರು September 30, 2024

    ತುಮಕೂರು ದಸರಾ ಉತ್ಸವ: ಬ್ರಾಹ್ಮಿ ಮುಹೂರ್ತದಲ್ಲಿ ದೇವಿ ಪ್ರತಿಷ್ಠಾಪನೆ | ಏನೇನು ವಿಶೇಷಗಳಿರಲಿದೆ, ಇಲ್ಲಿದೆ ಮಾಹಿತಿ

    By adminSeptember 30, 2024No Comments2 Mins Read
    tumakuru dasara

    ತುಮಕೂರು: ತುಮಕೂರು ದಸರಾ ಅಂಗವಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪೂಜಿಸುವ ಚಾಮುಂಡೇಶ್ವರಿ ದೇವಿಯನ್ನು ಶರನ್ನವರಾತ್ರಿಯ ಮೊದಲ ದಿನ ಅಕ್ಟೋಬರ್ 3ರ ಬೆಳಿಗ್ಗೆ 5.30 ಗಂಟೆಗೆ ಬ್ರಾಹ್ಮಿ ಮುಹೂರ್ತದಲ್ಲಿ ಪ್ರಾರಂಭಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ತಮ್ಮ ಕಚೇರಿಯಲ್ಲಿ ಸೋಮವಾರ ದಸರಾ ಉತ್ಸವದ ವಿವಿಧ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ದೇವಿಯನ್ನು ಶುಭ ಮುಹೂರ್ತದಲ್ಲಿ ಪ್ರತಿಷ್ಠಾಪಿಸುವುದರೊಂದಿಗೆ ಅಕ್ಟೋಬರ್ 12ರವರೆಗೂ ಪ್ರತೀ ದಿನ ಬ್ರಾಹ್ಮಿ ಮುಹೂರ್ತದಲ್ಲಿ ಪುಣ್ಯಾಹ, ಗಣಪತಿ ಪೂಜೆ, ಪ್ರಧಾನ ಕಳಶಾರಾಧನೆ, ಪಂಚಾಮೃತ ಅಭಿಷೇಕ, ಹೋಮ-ಹವನ, ಮಹಾ ಮಂಗಳಾರತಿ, ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಸೇರಿದಂತೆ ಎಲ್ಲಾ ಪೂಜಾ ವಿಧಾನಗಳು ಸಾಂಗವಾಗಿ ನಡೆಯಬೇಕು ಎಂದು ನಿರ್ದೇಶನ ನೀಡಿದರು.


    Provided by
    Provided by

    ದಸರಾ ಸಂದರ್ಭದಲ್ಲಿ ಪೂಜಾ ವಿಧಿ–ವಿಧಾನಗಳೊಂದಿಗೆ ಪ್ರತಿ ದಿನ ಸಂಜೆ ಹರಿಕಥೆ, ಭಜನೆ, ಭಕ್ತಿಗೀತೆ, ಮತ್ತಿತರ ಭಕ್ತಿಪ್ರಧಾನ ಕಾರ್ಯಕ್ರಮಗಳನ್ನು ಏರ್ಪಡಿಸಲು ಕ್ರಮಕೈಗೊಳ್ಳಬೇಕು. ಜೂನಿಯರ್ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ಧತೆ ಹಾಗೂ ಅಲಂಕಾರ, ನಿರಂತರ ವಿದ್ಯುತ್ ಸರಬರಾಜು, ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

    ನಗರವನ್ನು ಸ್ವಚ್ಛಗೊಳಿಸುವುದರೊಂದಿಗೆ ನಗರದಾದ್ಯಂತ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿ ಕಟ್ಟಡ ಹಾಗೂ ಪ್ರಮುಖ ಬೀದಿಗಳನ್ನು ವಿಶೇಷವಾಗಿ ವಿದ್ಯುತ್ ದೀಪಗಳಿಂದ ಕಂಗೊಳಿಸುವಂತೆ ಅಲಂಕರಿಸಬೇಕು ಎಂದು ಸೂಚನೆ ನೀಡಿದರು.
    ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ದಸರಾ ಉತ್ಸವ ಪ್ರಯುಕ್ತ ಅಕ್ಟೋಬರ್ 12ರಂದು ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯಲ್ಲಿ ದೇವಿಯನ್ನು ಕೂರಿಸಿರುವ ಅಲಂಕೃತ ಅಂಬಾರಿ ಹೊತ್ತ ಆನೆ; ವಿಂಟೇಜ್ ಕಾರ್; ಹುಲಿವೇಷ, ಚಿಟ್ಟಿಮೇಳ, ವೀರಗಾಸೆ ಸೇರಿದಂತೆ ವಿವಿಧ ಕಲಾ ತಂಡಗಳು, ಹಳ್ಳಿಕಾರ್ ಎತ್ತುಗಳು, 70 ವಿವಿಧ ದೇವರ ಉತ್ಸವ ಮೂರ್ತಿಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.

    ದಸರಾ ಪ್ರಯುಕ್ತ ಅಕ್ಟೋಬರ್ 11 ಮತ್ತು 12ರಂದು ಸಂಜೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಪ್ರಧಾನ ವೇದಿಕೆಯಲ್ಲಿ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಸಸಂಜೆ, ದ್ರೋಣ್ ಶೋ, ಬಾಣ-ಬಿರುಸುಗಳ ಪ್ರದರ್ಶನ, ವಸ್ತುಪ್ರದರ್ಶನಗಳು ನಡೆಯಲಿವೆಯಲ್ಲದೆ, ಯುವ ದಸರಾದ ಅಂಗವಾಗಿ ಅಕ್ಟೋಬರ್ 6 ರಿಂದ 10ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಯೂ ಸಹ ಖ್ಯಾತ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು.
    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಅರಣ್ಯ ಉಪ ಸಂರಕ್ಷಣಾಧಿಕಾರಿ ಅನುಪಮ, ಮುಜರಾಯಿ ತಹಶೀಲ್ದಾರ್ ಸವಿತ, ಅರ್ಚಕರ ಸಂಘದ ಅಧ್ಯಕ್ಷ ರಾಮತೀರ್ಥನ್, ವಿವಿಧ ದೇವಾಲಯದ ಧರ್ಮಾಧಿಕಾರಿಗಳು, ದಸರಾ ಉತ್ಸವ ಸಮಿತಿಗಳ ಪತ್ರಕರ್ತ ಸದಸ್ಯರು, ವಿವಿಧ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ ‘ಜಸ್ಟಿಸ್ ಫಾರ್ ಸೌಮ್ಯ’ ಚಿತ್ರ

    July 17, 2025

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ

    July 11, 2025
    Our Picks

    ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!

    July 17, 2025

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    July 16, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ಸರಗೂರು:  ತಾಲ್ಲೂಕಿನ ಪ. ಜಾತಿ ಮತ್ತು ಪ. ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷರಾಗಿ ಕ್ಲಾರ್ಕ್ ಕಂ ಡಿಇಒರಾದ…

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025

    ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ

    July 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.