ನವದೆಹಲಿ: ದೆವ್ವ ಬಿಡಿಸುವ ನೆಪದಲ್ಲಿ ಮಂತ್ರವಾದಿಯೋರ್ವ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭೀಣಿಯಾಗಿಸಿದ ಘಟನೆ ನೈಋತ್ಯ ದೆಹಲಿಯ ಬಾಬಾ ಹರಿದಾಸ್ ನಗರದಲ್ಲಿ ಈ ಘಟನೆ ನಡೆದಿದೆ
ಸಂತ್ರಸ್ತೆಯ ತಾಯಿ ದೆವ್ವ ಬಿಡಿಸಲು ಮಂತ್ರವಾದಿಯ ಬಳಿಗೆ ಬಾಲಕಿಯನ್ನು ಕರೆದೊಯ್ದಿದ್ದು, ಈ ವೇಳೆ ದೆವ್ವ ಬಿಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ ಬಾಲಕಿ 2 ತಿಂಗಳ ಗರ್ಭಿಣಿಯಾಗಿದ್ದಾಳೆ. ಪೊಲೀಸರು ಸಂತ್ರಸ್ತೆ ತಾಯಿಯಿಂದ ಮಾಹಿತಿ ಪಡೆದು ಪರಿಶೀಲಿಸುತ್ತಿದ್ದಾರೆ. ವಿಷಯ ಪೊಲೀಸರಿಗೆ ವರದಿಯಾದ ನಂತರ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


