ವೆಸ್ಟ್ ಇಂಡೀಸ್ ಮೂಲದ ಆಲ್ ರೌಂಡರ್ ಡ್ವೈನ್ ಬ್ರಾವೊ ಐಪಿಎಲ್ ಗೆ ವಿದಾಯ ಘೋಷಿಸಿದ್ದಾರೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಆಗಿ ತಂಡದಲ್ಲಿ ಮುಂದುವರಿಯಲಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಳೆದ ವರ್ಷ ಬೌಲಿಂಗ್ ಕೋಚ್ ಆಗಿದ್ದ ಎಲ್. ಬಾಲಾಜಿ ವೈಯಕ್ತಿಕ ಕಾರಣಗಳಿಗಾಗಿ ಈ ವರ್ಷ ಬಿಡುವು ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಡ್ವೈನ್ ಬ್ರಾವೊ ಈ ಜವಾಬ್ದಾರಿ ಹೊರಲಿದ್ದಾರೆ ಎನ್ನಲಾಗಿದೆ.
ನನ್ನ ಆಡುವ ದಿನಗಳು ಸಂಪೂರ್ಣವಾಗಿ ಮುಗಿಯಿತು ಎಂದು ನನಗೆ ಅನಿಸುತ್ತಿದೆ. ಆದ್ದರಿಂದ ಹೊಸ ಪ್ರಯಾಣವನ್ನು ಆರಂಭಿಸಲು ಉತ್ಸುಕನಾಗಿದ್ದೇನೆ ಎಂದು ಡ್ವೈನ್ ಬ್ರಾವೊ ಹೇಳಿದ್ದಾರೆ.
ನಾನು ಐಪಿಎಲ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ದಾಖಲೆ ಬರೆಯುತ್ತೇನೆ ಎಂದು ಊಹಿಸಿರಲಿಲ್ಲ. ಇನ್ನು ಮುಂದೆ ಮೈದಾನದಲ್ಲಿ ಮಿಡಾಫ್ ಅಥವಾ ಮಿಡಾನ್ ನಲ್ಲಿ ನಾನು ಕಾಣಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy