ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಣಗಳಲ್ಲಿ ಸುಳ್ಳು ಸುದ್ದಿಗಳನ್ನ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ವಿಚಾರಗಳಿಗೆ ಬ್ರೇಕ್ ಹಾಕೋ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದೆ. ಇದೇ ನಿಟ್ಟಿನಲ್ಲಿ ಇಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ರಾಜ್ಯ ಡಿಜಿ ಐಜಿಪಿ ಅಲೋಕ್ ಮೋಹನ್, ಕಮಿಷನರ್ ಬಿ. ದಯಾನಂದ್ ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.
ಸಾಮಾಜಿಕ ಜಾಲತಾಣದಲ್ಲಿ ಫೇಕ್ ನ್ಯೂಸ್ ಹಬ್ಬಿಸುವವರ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕು. ಸೈಬರ್ ವಂಚಕರ ಮೇಲೂ ಗಮನ ಹರಿಸಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಡಿಸಿಪಿ, ಎಸಿಪಿಗಳು ತಮ್ಮ ತಮ್ಮ ವ್ಯಾಪ್ತಿಯ ಒಂದು ಠಾಣೆಗಾದರೂ ಉನ್ನತ ಅಧಿಕಾರಿ ಭೇಟಿ ನೀಡಬೇಕೆಂದು ಸೂಚನೆ ನೀಡಿದ್ದಾರೆ. ಸಿಬ್ಬಂದಿ ಬಂದೋಬಸ್ತ್ ಕಾರ್ಯದಲ್ಲಿದ್ದರೆ ಅಧಿಕಾರಿಗಳು ಸಂಪರ್ಕದಲ್ಲಿರಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


