ಚಿತ್ರದುರ್ಗ: ಸ್ಕೂಟರ್ ಗೆ ವಾಹನವೊಂದು ಡಿಕ್ಕಿಯಾದ ಪರಿಣಾಮ ಸ್ಕೂಟರ್ ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಪ್ರಧಾನ ರಸ್ತೆಯಾದ ಅರಣ್ಯ ಇಲಾಖೆಯ ಬಳಿ ನಡೆದಿದೆ.
ಹಿರಿಯೂರು ನಗರದ ಟಿ.ಬಿ.ಸರ್ಕಲ್ ನಿಂದ ಗಾಂಧಿ ಸರ್ಕಲ್ ಗೆ ಬರುತ್ತಿದ್ದಂತಹ ಸ್ಕೂಟರ್ ಗೆ ಎದುರಿನಿಂದ ಬಂದ ವಾಹನವೊಂದು ಡಿಕ್ಕಿಯಾಗಿತ್ತು. ಅಪಘಾತದ ವೇಳೆ ಸ್ಕೂಟರ್ ಗೆ ಬೆಂಕಿ ಹತ್ತಿಕೊಂಡಿದ್ದು, ಸ್ಕೂಟರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಸ್ಕೂಟರ್ ನಲ್ಲಿದ್ದ ಮಹಿಳೆಯ ಬಲಗೈಗೆ ಹಾಗೂ ತಲೆಗೆ ಏಟು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಿರಿಯೂರು ತಾಲ್ಲೂಕಿನ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡ ಮಹಿಳೆಯು ಇದೀಗ ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


