ಪಾವಗಡ: ತಾಲ್ಲೂಕು ಯೋಜನಾ ಕಚೇರಿ ವ್ಯಾಪ್ತಿಯ ಪಳವಳ್ಳಿ ವಲಯದ ದೊಡ್ಡಹಳ್ಳಿ ಗ್ರಾಮದಲ್ಲಿ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಧಾಮಿ೯ಕ ಕಾರ್ಯಕ್ರಮ ನಡೆಯಿತು.
ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಜನಜಾಗೃತಿ ಸದಸ್ಯರಾದ ಅಶ್ವಥ್ ಕುಮಾರ್, ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರು ಎಲ್ಲಾ ಸಾವ೯ಜನಿಕರು ಸ್ವ –ಸಹಾಯ ಸಂಘಗಳ ಸದಸ್ಯರು ಸೇರಿಕೊಂಡು ಸಾಮೂಹಿಕವಾಗಿ ಸರಳವಾಗಿ ಪೂಜಾ ಕಾಯ೯ಕ್ರಮ ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನಮ್ಮೆಲ್ಲರ ಪುಣ್ಯ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಯೋಜನಾಧಿಕಾರಿಗಳಾದ ಮಹೇಶ್ ಮಾತನಾಡಿ, ಪೂಜ್ಯರ ದೂರದೃಷ್ಠಿ ಆಶಯದಂತೆ ನಮ್ಮ ತಾಲ್ಲೂಕಿನಲ್ಲಿ ಸ್ವ–ಸಹಾಯ ಸಂಘಗಳ ಒಕ್ಕೂಟಗಳ ಮೂಲಕ ಬ್ಯಾಂಕ್ ಗಳ ಆಥಿ೯ಕ ಸಹಾಯದೊಂದಿಗೆ ಕಾರ್ಯಕ್ರಮಗಳು ಅನುಷ್ಠಾನವಾಗುತ್ತಿದೆ ಎಂದು ತಿಳಿಸಿದರು.
ಕಾಯ೯ಕ್ರಮ ದಲ್ಲಿ ದಿವ್ಯಸಾನಿಧ್ಯವಹಿಸಿ ಆಶೀವ೯ಚನ ನೀಡಿದ ನಿಡಗಲ್ ಸಂಸ್ಥಾನದ ವಾಲ್ಮೀಕಿ ಶ್ರೀ ಸಂಜಯ್ ಕುಮಾರ್ ಮಹಾಸ್ವಾಮಿಗಳು, ಧಮ೯ಸ್ಥಳದ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರು ಎಲ್ಲಾ ವಗ೯ಗಳ ಕೋಟ್ಯಾಂತರ ಕುಟುಂಬಗಳ ಸವ೯ತೋಮುಖ ಅಭಿವೃದ್ದಿಗೆ ಸಹಾಯ ಮಾಡುತ್ತಿರುವುದು ದೇಶದಲ್ಲಿಯೇ ಶ್ಲಾಘನೀಯ ಎಂದರು.
ಈ ಕಾಯ೯ಕ್ರಮದಲ್ಲಿ ಚಿಕ್ಕಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು ಭಾಗಿಗಳಾಗಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q