ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ವೈಫಲ್ಯದ ವಿರುದ್ಧ ವಿಧಾನಮಂಡಲ ಅಧಿವೇಶನದ ಆರಂಭದ ದಿನದಿಂದಲೇ ಪ್ರತಿಭಟನೆ ನಡೆಸುತ್ತೇವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ. ಎಸ್. ಯಡಿಯೂರಪ್ಪ ಹೇಳಿದರು.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಂಬತ್ತು ವರ್ಷಗಳನ್ನು ಪೂರೈಸಿರುವ ಪ್ರಯುಕ್ತ ಶನಿವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಸಂಜೆ ನಡೆದ ಬೆಂಗಳೂರು ಕೇಂದ್ರ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯಲ್ಲೂ ಇದೇ ಮಾತು ಹೇಳಿದರು.
ಕಾಂಗ್ರೆಸ್ ನೀಡಿದ್ದ ‘ಗ್ಯಾರಂಟಿ’ ಭರವಸೆಗಳೇ ನಮ್ಮ ಸೋಲಿಗೆ ಕಾರಣ. ಅವರು ಅಧಿಕಾರದ ಮದದಿಂದ ಏನೇನೋ ಭರವಸೆಗಳನ್ನು ಕೊಟ್ಟು, ಈಗ ನರೇಂದ್ರ ಮೋದಿಯವರತ್ತ ಕೈ ತೋರಿಸುತ್ತಿದ್ದಾರೆ. ಕೊಟ್ಟ ಮಾತಿನಂತೆ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಬೇಕು. ಐದೂ ಗ್ಯಾರಂಟಿಗಳನ್ನು ಚಾಚೂ ತಪ್ಪದೆ ಅನುಷ್ಠಾನಕ್ಕೆ ತರಲಿ. ಇಲ್ಲವಾದರೆ ಅಧಿಕಾರ ಬಿಟ್ಟು ತೊಲಗಲಿ’ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


