ತುಮಕೂರು: ಅತಿಥಿ ಉಪನ್ಯಾಸಕರ ಮುಷ್ಕರ ಸ್ಥಳಕ್ಕೆ ತುಮಕೂರು ನಗರದ ಶಾಸಕರಾದ ಜ್ಯೋತಿ ಗಣೇಶ್ ಅವರು ಆಗಮಿಸಿದ್ದರು, ಪ್ರತಿಭಟನಾಕಾರರ ಜೊತೆಗೆ ಮಾತನಾಡಿದರು.
ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಆಗಮಿಸಿದ ಶಾಸಕರು, ಅತಿಥಿ ಶಿಕ್ಷಕರ ಸಮಸ್ಯೆಯ ಬಗ್ಗೆ ಅರಿವಿದೆ. ನಿಮಗೆ ಸರ್ಕಾರ ಒಳ್ಳೆಯದು ಮಾಡುವ ನಿರೀಕ್ಷೆ ಇದೆ. ಈ ವಿಚಾರದ ಬಗ್ಗೆ ಉನ್ನತ ಶಿಕ್ಷಣ ಸಚಿವರ ಜೊತೆಗೆ ಮಾತನಾಡುವುದಾಗಿ ಅವರು ಹೇಳಿದರು.
ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಉನ್ನತ ಶಿಕ್ಷಣ ಉನ್ನತ ಶಿಕ್ಷಣ ಇಲಾಖೆಯ ಅಪರ ಕಾರ್ಯದರ್ಶಿಗಳೊಂದಿಗೆ ಕೂಡ ಚರ್ಚಿಸಿ, ಶೀಘ್ರ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳುವುದಾಗಿ ತಿಳಿಸಿದರು.
ವರದಿ : ಸೌಮ್ಯ ಎಸ್.ಬಿ., ಸಿರಾ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy