ಬೆಂಗಳೂರು: ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ ಅಂತ ಧರ್ಮಸ್ಥಳ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ, ಈಗ ನಾಟಕ ಮಾಡುತ್ತಿರುವವರು ಅವರೇ ಎಂದು ಅವರು ಹೇಳಿದರು.
ಎನ್ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು ಎಂದು ನೇರವಾಗಿ ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC