ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ದೂರುದಾರ ಚಿನ್ನಯ್ಯನನ್ನು ಸ್ಥಳ ಮಹಜರಿಗಾಗಿ ಎಸ್ ಐಟಿ ಅಧಿಕಾರಿಗಳು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದೆ ಎಂದು ತಿಳಿದು ಬಂದಿದೆ.
ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಎಸ್ ಐಟಿ ತಂಡವು ಚಿನ್ನಯ್ಯ ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಸ್ಥಳಗಳಲ್ಲಿ ಮಹಜರು ನಡೆಸಲು ಬಿಗಿ ಭದ್ರತೆಯಲ್ಲಿ ಕರೆದೊಯ್ದಿದೆ.
ಚಿನ್ನಯ್ಯನನ್ನು ನಿಖರವಾಗಿ ಎಲ್ಲಿಗೆ ಕರೆದೊಯ್ಯಲಾಯಿತು ಎಂಬುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಇಲ್ಲ. ಭದ್ರತೆಯ ದೃಷ್ಟಿಯಿಂದ ಈ ಪ್ರಕ್ರಿಯೆಯನ್ನು ಬೆಳಗಿನ ಜಾವ ನಡೆಸಲಾಯಿತು. ಭೇಟಿ ನೀಡಿದ ಸ್ಥಳಗಳು ಮತ್ತು ಪಡೆದುಕೊಂಡ ದಾಖಲೆಗಳ ವಿವರಗಳನ್ನು ಈ ಹಂತದಲ್ಲಿ ಬಹಿರಂಗಪಡಿಸಲು ಆಗುವುದಿಲ್ಲ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC