ಮೈಸೂರು: ಬಿಜೆಪಿಯ “ಧರ್ಮಸ್ಥಳ ಚಲೋ” ರ್ಯಾಲಿ “ರಾಜಕೀಯ ಲಾಭಕ್ಕಾಗಿ” ಎಂದು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದರಿಂದ ವಿರೋಧ ಪಕ್ಷಕ್ಕೆ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಸೋಮವಾರ ಹೇಳಿದ್ದು ಹೇಳಿದ್ದಾರೆ.
ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದ ವಿಷಯದಲ್ಲಿ ಬಿಜೆಪಿಯ ನಡವಳಿಕೆ “ಬೂಟಾಟಿಕೆ” ಎಂದು ಕರೆದ ಮುಖ್ಯಮಂತ್ರಿ, ಅವರು ಮಾಡುತ್ತಿರುವ “ಬೂಟಾಟಿಕೆ”ಯಿಂದ ಹಿಂದೂಗಳು ತಮ್ಮೊಂದಿಗೆ ಬರುತ್ತಾರೆ ಎಂದು ಭಾವಿಸಿದ್ದಾರೆ. ಆದರೆ ಅದು ತಪ್ಪು ಎಂದು ತಿರುಗೇಟು ನೀಡಿದರು.
ಧರ್ಮಸ್ಥಳದ ವಿರುದ್ಧ ಪಿತೂರಿ ಮತ್ತು ಅಪಪ್ರಚಾರ ಖಂಡಿಸಿ ಬಿಜೆಪಿ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜಕೀಯವಾಗಿ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ ಎಂದು ವಾಗ್ದಾಳಿ ನಡೆಸಿದರು.
ಇನ್ನು ಚಾಮುಂಡಿ ಬೆಟ್ಟ ಮತ್ತು ದೇವಾಲಯದ ವಿಷಯದಲ್ಲಿ ‘ಚಾಮುಂಡಿ ಚಲೋ’ ಮಾಡಬೇಕಾಗುತ್ತದೆ ಎಂದು ಬಿಜೆಪಿ ಎಚ್ಚರಿಸಿರುವ ಕುರಿತ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಇಂತಹ ಕೆಲಸಗಳನ್ನು ಮಾಡುವುದರಿಂದ ಹಿಂದುತ್ವ ಬಲಗೊಳ್ಳುತ್ತದೆ ಮತ್ತು ಹಿಂದೂಗಳು ತಮ್ಮೊಂದಿಗೆ ಬರುತ್ತಾರೆ ಎಂದು ಬಿಜೆಪಿ ಭಾವಿಸಿದೆ” ಎಂದರು.
“ನಾನೂ ಒಬ್ಬ ಹಿಂದೂ….. ನಮ್ಮ ಹಳ್ಳಿಯಲ್ಲಿ ನಾವು ರಾಮ ಮಂದಿರವನ್ನು ನಿರ್ಮಿಸಿಲ್ಲವೇ? ಹಿಂದುಗಳೆಂದರೆ ರಾಜಕೀಯ, ಅಪಪ್ರಚಾರ ಮಾಡುವುದಲ್ಲ, ಸುಳ್ಳು ಹೇಳುವುದಲ್ಲ. ಯಾರೇ ಆದರೂ ಮನಷ್ಯತ್ವವಿರಬೇಕು ಎಂದರು. ಬಿಜೆಪಿಯವರು ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದು ಬಿಟ್ಟು ಬೇರೇನಾದರೂ ಅವರಿಗೆ ಬರುತ್ತದೆಯೇ ಎಂದರು.” ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC