ಬೆಂಗಳೂರು: ಧರ್ಮಸ್ಥಳದ ವಿಚಾರಕ್ಕೆ ಸಂಬಂಧ ಪಟ್ಟಂತೆ ತನಿಖೆ ನಡೆಸಲು ನ್ಯಾಯಾಲಯದ ಅದೇಶದ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ. ಅದನ್ನು ತಪ್ಪು ಎನ್ನುವುದಾದರೆ, ನ್ಯಾಯಾಲಯದಲ್ಲೇ ಪ್ರಶ್ನೆ ಮಾಡಬೇಕಿತ್ತು ಎಂದು ಲೋಕೋ ಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ರಾಜ್ಯಸರ್ಕಾರವನ್ನು ಟೀಕಿಸಲು ಸರಿಯಾದ ವಿಚಾರಗಳಿಲ್ಲ. ಹೀಗಾಗಿ ಅನಗತ್ಯವಾಗಿ ವಿವಾದ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಮೊದಲೆಲ್ಲಾ ಗ್ಯಾರಂಟಿ ಯೋಜನೆಗಳ ವಿರುದ್ದ ಟೀಕೆ ಮಾಡುವ ಪ್ರಯತ್ನ ಮಾಡಿದರು. ಅದನ್ನು ಯಾರೂ ಕೇಳಲಿಲ್ಲ. ಅನಂತರ ಬೇರೆ ಬೇರೆ ವಿಚಾರಗಳನ್ನು ಪ್ರಸ್ತಾಪಿಸಿ ಟೀಕೆ ಮಾಡುವ ಪ್ರಯತ್ನ ಮಾಡಿದರು. ಅದರಿಂದ ಯಾವುದೇ ಪ್ರಯೋಜನವಾಗದಿದ್ದಾಗ, ಈಗ ಧರ್ಮಸ್ಥಳದ ವಿಚಾರ ಹಿಡಿದು ಕೊಂಡಿದ್ದಾರೆ ಎಂದರು.
ಇದರಲ್ಲಿ ಕಾಂಗ್ರೆಸ್‌ನ ಪಾತ್ರ ಏನೂ ಇಲ್ಲ. ರಾಜ್ಯಸರ್ಕಾರಕ್ಕೆ ಇದರಿಂದ ಲಾಭವೂ ಇಲ್ಲ, ನಷ್ಟವೂ ಇಲ್ಲ. ದೂರು ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯ ಆದೇಶ ನೀಡಿದೆ. ಅದರ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸಲಾಗುತ್ತಿದೆ. ಬಿಜೆಪಿಯವರು ದಿಕ್ಕು ತಪ್ಪಿಸಲು ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC