ಸರಗೂರು: ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಳ್ಳೂರು ವಲಯದ ಸಂಘದ ಸದಸ್ಯ ರಾಜಶೇಖರಪ್ಪ ಹುಲಿ ದಾಳಿಗೆ ಮೃತಪಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಶುಕ್ರವಾರ ದಂದು ಭೇಟಿ ನೀಡಿ ಸಾಂತ್ವನ ಹೇಳಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 30 ಸಾವಿರ ಚೆಕ್ ವಿತರಣೆ ಮಾಡಿದರು.
ಹುಲ್ಲಹಳ್ಳಿ ಯೋಜನಾ ಕಚೇರಿಯ ಯೋಜನಾಧಿಕಾರಿ ಗಣೇಶ ನಾಯಕ್ ಮಾತನಾಡಿ, ಅ.26ರಂದು ತಮ್ಮ ಜಮೀನಿನಲ್ಲಿ ಕೃಷಿ ಕಾಯಕದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ ಹುಲಿ ಏಕಾಏಕಿ ಗುಂಪಿನ ಸದಸ್ಯ ಮೇಲೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದು, ಸದರಿ ಕುಟುಂಬಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ವತಿಯಿಂದ ಕುಟುಂಬಕ್ಕೆ ಸಹಾಯಧನ ನೀಡಲು ಮನವಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಕಳಿಸಿ ಕೊಟ್ಟಿದ್ದು, ಅವರ ಆದೇಶ ಮೇರೆಗೆ 30 ಸಾವಿರ ಸಹಾಯಧನ ಮಂಜೂರು ಮಾಡಿದ ಮಂಜೂರಾತಿ ಪತ್ರ ಹಾಗೂ ಚೆಕ್ ನೀಡಲಾಯಿತು ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಸಮಾಜ ಮುಖಿಯಾಗಿ ಕೆಲಸ ಮಾಡಿಕೊಂಡು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ರವರು ಬರುತ್ತಿದ್ದಾರೆ. ಅವರು ಸಂಘದಲ್ಲಿ ಇರುವ ಸದಸ್ಯರಿಗೆ ಸಮಸ್ಯೆ ಇದೆ ಎಂದು ವಲಯ ಅಧಿಕಾರಿಗಳಿಗೆ ಗಮನಕ್ಕೆ ಬಂದ ಕೂಡಲೇ ಧರ್ಮಾಧಿಕಾರಿ ರವರಿಗೆ ಪತ್ರ ಕಳಿಸಿಕೊಟ್ಟರೆ ಸೂಚನೆ ನೀಡಿದ ಬಳಿಕ ಸದಸ್ಯರಿಗೆ ಸಹಾಯ ಮಾಡುತ್ತೇವೆ ಎಂದು ತಿಳಿಸಿದರು.
ಗ್ರಾಮದ ಮುಖಂಡರಾದ ಶಿವರುದ್ರಪ್ಪ, ನಾಗರಾಜ್, ಮುಳ್ಳೂರು ವಲಯ ಮೇಲ್ವಿಚಾರಕ ನರಸಿಂಹಮೂರ್ತಿ, ಕೃಷಿ ಮೇಲ್ವಿಚಾರಕ ಸೇವಾ ಪ್ರತಿನಿಧಿ ಸರ್ವಮಂಗಳ, ಗ್ರಾಮದ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


