ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ.
ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ.
ಎಸ್ ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. SIT ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುತ್ತದೆ ಎಂದು ಆದೇಶದಲ್ಲಿ ಸೇರಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ (BNS) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಾಗಿರುವ ಅಪರಾಧ ಮತ್ತು “ಕರ್ನಾಟಕದಾದ್ಯಂತ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗಲಿರುವ ಎಲ್ಲಾ ಇತರ ಕ್ರಿಮಿನಲ್ ಪ್ರಕರಣಗಳನ್ನು” ತನಿಖೆ ಮಾಡಲು “ವಿಶೇಷ ತನಿಖಾ ತಂಡವನ್ನು ರಚಿಸುವುದು ಸೂಕ್ತ” ಎಂದು ಶನಿವಾರ ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


