ಶ್ರೀ ಕ್ಷೇತ್ರ ಧರ್ಮಸ್ಥಳ: ಸಿರಿ ಸಂಸ್ಥೆ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡು ಕಚೇರಿಯಲ್ಲಿ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯರು ,ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು ,ಪದ್ಮಶ್ರೀ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಡೆ ಹಾಗೂ ಸಿರಿ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ. ಹೇಮಾವತಿ ವಿ .ಹೆಗಡೆ ದಂಪತಿಗಳು 2025 ನೇ ಸಾಲಿನ ನೂತನ ಕ್ಯಾಲೆಂಡರ್ ಗಳನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ಶೇಖರ್ ಹಾಗೂ ಸಿಬ್ಬಂದಿ ವರ್ಗದವರು ಸೇವೆಯನ್ನು ಸ್ಮರಿಸಿದರು .
ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಜನಾರ್ಧನ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಡಿದರು.
ಕಾರ್ಯಕ್ರಮದಲ್ಲಿ ಸಿರಿ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಮಾರುಕಟ್ಟೆ ವಿಭಾಗದ ಅಧಿಕಾರಿಗಳು ,ವಲಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಜೆ.ರಂಗನಾಥ, ತುಮಕೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx