ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ತುರುವೇಕೆರೆ ಗ್ರಾಮಾಂತರ ಯೋಜನಾ ಕಚೇರಿಯ ಯೋಜನಾಧಿಕಾರಿಗಳಾದ ಅನಿತಾ ಶೆಟ್ಟಿ ಅವರ ನೇತೃತ್ವದಲ್ಲಿ ಕಿಟ್ ವಿತರಣೆ ಮಾಡಲಾಯಿತು.
ಮಾಯಸಂದ್ರ ವಲಯದ ಜಡೆಯ ಗ್ರಾಮ ಹಾಗೂ ಬೈತರಹೊಸಹಳ್ಳಿ ಗ್ರಾಮದಲ್ಲಿ ತಮ್ಮ ಸಂಸ್ಥೆಯ ಯೋಜನೆಯಾದ ವಾತ್ಸಲ್ಯ ಯೋಜನೆಯಲ್ಲಿ ಅರ್ಹ ಅಶಕ್ತ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಣೆ ಮಾಡಲಾಯಿತು .
ಈ ಸಂದರ್ಭದಲ್ಲಿ ಮಾಯಸಂದ್ರ ವಲಯದ ಮೇಲ್ವಿಚಾರಕಿಯರಾದ ಅಕ್ಷತಾ ಹಾಗೂ ವಲಯದ ಸೇವಾಪ್ರತಿನಿಧಿಗಳು ಸ್ವಸಹಾಯ ಸಂಘಗಳ ಸದಸ್ಯರು ಹಾಜರಿದ್ದರು.
ವರದಿ: ಸುರೇಶ್ ಬಾಬು. ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy