nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026
    Facebook Twitter Instagram
    ಟ್ರೆಂಡಿಂಗ್
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    • ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!
    • ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    ಜಿಲ್ಲಾ ಸುದ್ದಿ February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    By adminFebruary 28, 2026No Comments2 Mins Read
    santhosh lad

    ಧಾರವಾಡ: ಜಿಲ್ಲೆಯ ಎಲ್ಲ ವಿಶೇಷ ಚೇತನ ಹಾಗೂ ದಿವ್ಯಾಂಗ ಮಕ್ಕಳ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ಅವರಿಗೆ ಅಗತ್ಯವಿರುವ ಉಪಕರಣ ಹಾಗೂ ಸೌಲಭ್ಯಗಳನ್ನು ಸರ್ಕಾರದಿಂದ ನೀಡಲಾಗುತ್ತಿದೆ. ವಿಶೇಷ ಚೇತನರನ್ನು ಸಂರಕ್ಷಿಸುತ್ತಿರುವ ಕುಟುಂಬಗಳಿಗೂ ಸರ್ಕಾರದ ನಿಯಮಾನುಸಾರ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.

    ಅವರು ಇಂದು (ಫೆ. 27) ಬೆಳಿಗ್ಗೆ ಶಿಕ್ಷಕೀಯರ ಸರ್ಕಾರಿ ತರಬೇತಿ ಕಾಲೇಜು (ಟಿಸಿಡಬ್ಲ್ಯೂ) ಸಭಾಂಗಣದಲ್ಲಿ ಜಿಲ್ಲಾ ಅಂಗವೀಕಲರ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಂತೋಷ ಲಾಡ್ ಪೌಂಡೇಶನ್ ಮತ್ತು ಜನಮುಖಿ ಸೇವಾ ಸಂಸ್ಥೆ ಸಂಯುಕ್ತವಾಗಿ ಆಯೋಜಿಸಿದ್ದ ವಿಶೇಷ ಚೇತನರು ಹಾಗೂ ಅವರ ಕುಟುಂಬದವರೊಂದಿಗೆ ಸಂವಾದ ಮತ್ತು ಸಂತೋಷ ಲಾಡ್ ಪೌಂಡೇಶನ್ ನೀಡಿರುವ ವಿಕಲಚೇತನರ ಸಾಧನಗಳನ್ನು ವಿತರಿಸಿ ಮಾತನಾಡಿದರು.


    Provided by
    Provided by

    ವಿಕಲಚೇತನರನ್ನು ವಿಶೇಷ ಕಾಳಜಿ ಮತ್ತು ಹೆಮ್ಮೆಯಿಂದ ಸಂರಕ್ಷಿಸಬೇಕು. ಅವರ ಬಗ್ಗೆ ಬರೀ ಕರುಣೆ ತೊರದೆ, ನ್ಯಾಯಯುತವಾಗಿ ಅವರಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವಲ್ಲಿ ಇಲಾಖೆಗಳು, ಅಧಿಕಾರಿಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಕ್ರಮವಹಿಸಬೇಕೆಂದು ಅವರು ಹೇಳಿದರು.

    ಸಂತೋಷ ಲಾಡ್ ಪೌಂಡೇಶನ್ ವತಿಯಿಂದ ಮಾದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಚಿವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅನೇಕ ವಿಕಲಚೇತನ ಮಕ್ಕಳಿಗೆ ವ್ಹಿಲ್ ಚೇರ್, ಆಟಿಕೆ ಸಾಮಾನು, ಹಣ್ಣು ಹಾಗೂ ಧಾನ್ಯದ ಕಿಟ್ ಮತ್ತು ವಿಕಲಚೇತನ ಮಗುವಿಗೆ ಆರ್ಥಿಕ ಸಹಾಯ ನೀಡಲಾಗಿದೆ. ವಿಕಲಚೇತನ ಹಾಗೂ ದಿವ್ಯಾಂಗ ಮಕ್ಕಳ ಯೋಗಕ್ಷೇಮ ಹಾಗೂ ಅವರ ಆರೋಗ್ಯ ಮತ್ತು ಸಂರಕ್ಷಣೆಗೆ ಸರ್ಕಾರದೊಂದಿಗೆ ಸರ್ಕಾರೇತರ ಸಂಸ್ಥೆಗಳು ಕೈಜೊಡಿಸಬೇಕು. ಇದರಿಂದ ವಿಕಲಚೇತನರಲ್ಲಿಯೂ ಬದುಕಿನ ಆತ್ಮವಿಶ್ವಾಸ ಮೂಡುತ್ತದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ವಿಶೇಷ ಕಾಳಜಿ ಮತ್ತು ಆತ್ಮವಿಶ್ವಾಸದ ಅಗತ್ಯವಿರುವ ವಿಶೇಷ ಚೇತನ ಹಾಗೂ ದಿವ್ಯಾಂಗ ಮಕ್ಕಳಿಗೆ ಸರ್ಕಾರಕ್ಕಿಂತ ಸಮಾಜದ ಹಾಗೂ ಸಮುದಾಯದ ಬೆಂಬಲ ಅಗತ್ಯವಿದೆ. ವಿಶೇಷ ಚೇತನರಲ್ಲಿ ಸಾಮಾನ್ಯಗಿಂತ ವಿಶೇಷವಾದ ಬುದ್ಧಿವಂತಿಕೆ ಹಾಗೂ ಜ್ಞಾನ ಇರುತ್ತದೆ. ಇದನ್ನು ಗುರುತಿಸಿ, ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಹೇಳಿದರು.

    ಜಿಲ್ಲಾ ಉಸ್ತುವಾರಿ ಸಚಿವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಸರ್ಕಾರೇತರ ಸಂಸ್ಥೆಗಳು ಹಾಗೂ ಇಲಾಖೆಗಳಿಂದ ಸಮಾಜಮುಖಿ ಕಾರ್ಯ ನೆರವೇರುತ್ತಿದೆ. ಜಿಲ್ಲಾ ಪಂಚಾಯತ್‍ಯಿಂದ ಹಾಗೂ ಗ್ರಾಮ ಪಂಚಾಯತಿಗಳಿಂದ ವಿಕಲಚೇತನರ ಅಭಿವೃದ್ಧಿಗಾಗಿ ವಿಶೇಷ ಅನುದಾನಗಳನ್ನು ನೀಡಲಾಗುತ್ತಿದೆ ಎಂದು ಸಿಇಓ ಭುವನೇಶ ಪಾಟೀಲ ಅವರು ತಿಳಿಸಿದರು.

    ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಧಾರವಾಡ ತಹಶೀಲ್ದಾರ ಡಾ. ಡಿ.ಎಚ್.ಹೂಗಾರ, ಧಾರವಾಡ ಗ್ರಾಮೀಣ ಮತ್ತು ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ, ಡಿಡಿಪಿಐ ಕಚೇರಿಯ ಡಿವೈಪಿಸಿ ಅಧಿಕಾರಿ ಎಸ್.ಎಮ್.ಹುಡೇದಮನಿ, ಜನಮುಖಿ ಸೇವಾ ಸಂಸ್ಥೆಯ ಬಸವರಾಜ ಮ್ಯಾಗೇರಿ, ದೈಹಿಕ ಶಿಕ್ಷಕ ರವಿಕುಮಾರ ಬಾರಾಟಕೆ ಹಾಗೂ ಸಂತೋಷ ಲಾಡ್ ಪೌಂಡೇಶನ್‍ದ ಡಾ. ಜೆ.ಸಂದೀಪ, ಸಚಿವರ ಆಪ್ತ ಸಹಾಯಕ  ಶ್ರೀಕಾಂತ ಗಾಯಕವಾಡ ಸೇರಿದಂತೆ ಇತರರು ಭಾಗವಹಿಸಿದ್ದರು.

    ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹುಟ್ಟು ಹಬ್ಬದ ವಿಶೇಷತೆ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ ಲಾಡ್ ಅವರ 51 ನೇ ಹುಟ್ಟು ಹಬ್ಬವನ್ನು ವಿವಿದ ಇಲಾಖೆಗಳ ಹಾಗೂ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಸಂತೋಷ ಲಾಡ್ ಫೌಂಡೇಶನ್‍ದಿಂದ ಇಂದು ವಿಶೇಷವಾಗಿ ಜಿಲ್ಲೆಯಲ್ಲಿ ಆಚರಿಸಲಾಯಿತು.

    ಧಾರವಾಡದಲ್ಲಿನ ಸರಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆ, ಹುಬ್ಬಳ್ಳಿಯಲ್ಲಿನ ನಿರಾಶ್ರಿತರ ಕಲ್ಯಾಣ ಕೇಂದ್ರ ಮತ್ತು ಕಲಘಟಗಿ ಪಟ್ಟಣದಲ್ಲಿ ವಿಶೇಷ ಚೇತನರಿಗೆ ಹಾಗೂ ನಿರಾಶ್ರಿತರಿಗೆ 20 ವ್ಹೀಲ್ ಚೇರ್, 100 ಪಿಜಿಯೋಥೆರಪಿ ಬಾಲ್, 50 ತೂಕದ ಸಾಧನ ಸೇರಿದಂತೆ ಸುಮಾರು 10 ಲಕ್ಷ ಮೊತ್ತದ ಸಾಧನಗಳನ್ನು ಧಾರವಾಡ ಜಿಲ್ಲೆಯಲ್ಲಿ ವಿತರಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ…

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.