ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ಭದ್ರಕೋಟೆ ದಾವಣಗೆರೆ ಜಿಲ್ಲೆಯ ಹರಿಹರ ನಗರದ ಗಾಂಧಿ ಮೈದಾನದಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಜಿಲ್ಲೆಯ 7 ಕ್ಷೇತ್ರಗಳ ಅಭ್ಯರ್ಥಿಗಳು ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಜೊತೆಗೆ ಕಾಫಿನಾಡು ಚಿಕ್ಕಮಗಳೂರು ನಗರದಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ. ಹೆಚ್.ಡಿ.ತಮ್ಮಯ್ಯ ಪರ ಮತಯಾಚನೆ ಮಾಡಲಿದ್ದಾರೆ. ಕೆಇಬಿ ಸರ್ಕಲ್ ನಿಂದ ಅಜಾದ್ ಪಾರ್ಕ್ ಸರ್ಕಲ್ ವೆರೆಗೂ ರೋಡ್ ಶೋ ನಡೆಸಿ ಆಜಾದ್ ಪಾರ್ಕ್ ನಲ್ಲಿ ಬಹಿರಂಗ ಭಾಷಣ ಮಾಡಲಿದ್ದಾರೆ. ಮತ್ತೊಂದೆಡೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ ನಡೆಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಎಂ.ಸಿ.ಸುಧಾಕರ್ ಪರ ಮತಯಾಚನೆ ಮಾಡಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


