ಹಿರಿಯ ನಟ ಹರೀಶ್ ರಾಯ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದೇ ಸಂದರ್ಭದಲ್ಲಿ ನಟ ಧ್ರುವ ಸರ್ಜಾ ಹಿರಿಯ ನಟನಿಗೆ ಸಹಾಯ ನೀಡಲು ಮುಂದಾಗಿದ್ದಾರೆ.
ನಟ ಹರೀಶ್ ರಾಯ್ ಅವರ ಆಸ್ಪತ್ರೆಯ ಖರ್ಚನ್ನ ಭರಿಸುವುದಾಗಿ ಧ್ರುವ ಹೇಳಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ನಟ ಧ್ರುವ ಸರ್ಜಾ ಅವರಿಗೆ ಹರೀಶ್ ರಾಯ್ ಧನ್ಯವಾದವನ್ನ ಹೇಳಿದ್ದಾರೆ.
ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಹೊಟ್ಟೆಗೆ ಹರಡಿ ಈಗ ಹೊಟ್ಟೆಯಲ್ಲಿ ನೀರು ತುಂಬಿಕೊಂಡಿದೆ. ಇದಕ್ಕೆ ಸೂಕ್ತ ಚಿಕಿತ್ಸೆ ನೀಡಿದ್ರೆ ವಾಸಿಯಾಗುವ ಭರವಸೆಯನ್ನ ವೈದ್ಯರು ನೀಡಿದ್ದಾರೆ. ಹರೀಶ್ ರಾಯ್ ಅವರಿಗೆ ನೀಡಬೇಕಾದ ಚಿಕಿತ್ಸೆ ದುಬಾರಿಯಾಗಿದ್ದು, ಒಂದೊಂದು ಇಂಜೆಕ್ಷನ್ ಬೆಲೆ ಮೂರುವರೆ ಲಕ್ಷ ರೂಪಾಯಿಗಳದ್ದು ಎಂದು ವರದಿಗಳಿಂದ ತಿಳಿದು ಬಂದಿದೆ.
ಹರೀಶ್ ರಾಯ್ ಅವರಿಗೆ ತುರ್ತಾಗಿ ಚಿಕಿತ್ಸೆ ಕೂಡಾ ಪ್ರಾರಂಭಿಸಬೇಕಿದೆ ಎಂದು ವೈದ್ಯರು ಸಲಹೆಯನ್ನ ನೀಡಿದ್ದಾರಂತೆ. ಹೀಗಾಗಿ ಚಿತ್ರರಂಗದವರ ನೆರವನ್ನ ಹರೀಶ್ ರಾಯ್ ಕೇಳಿದ್ದರು.ಹರೀಶ್ ರಾಯ್ ಕಷ್ಟದ ಈ ಸಂದರ್ಭಕ್ಕೆ ನಟ ಧ್ರುವ ಸರ್ಜಾ ಮಿಡಿದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC