ತುಮಕೂರು: ಮುಂಬೈಗೆ ತೆರಳುವ ಮಾರ್ಗ ಮಧ್ಯೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಚಿತ್ರನಟ ಧ್ರುವ ಸರ್ಜಾ ಭೇಟಿ ನೀಡಿ ಶ್ರೀ ಸಿದ್ದಲಿಂಗಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠಕ್ಕೆ ಆಗಮಿಸಿದ ಧ್ರುವ ಸರ್ಜಾ ಶ್ರೀ ಶಿವಕುಮಾರಸ್ವಾಮೀಜಿ ಗದ್ದುಗೆ ದರ್ಶನ ಪಡೆದರು.
ಮುಂಬೈನಲ್ಲಿನ ಮರ‍್ಟಿನ್ ಚಿತ್ರದ ಟ್ರೈಲರ್ ಲಾಂಚಿಂಗ್ ಇವೆಂಟ್ ಗಾಗಿ ಮುಂಬೈಗೆ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು.
ಸಿದ್ದಗಂಗಾ ಮಠಕ್ಕೆ ತಮ್ಮ ನೆಚ್ಚಿನ ನಟ ಆಗಮಿಸುತ್ತಿದ್ದಾರೆ ಎಂಬ ವಿಷಯ ತಿಳಿದ ಅಭಿಮಾನಿಗಳು ದ್ರುವ ಸರ್ಜಾ ನೋಡಲು ಮುಗಿ ಬಿದ್ದರು. ಮಠದ ಆವರಣದಲ್ಲಿ ಜಮಾಯಿಸಿದ ಅಭಿಮಾನಿಗಳು, ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಭಾರೀ ನೂಕುನುಗ್ಗಲು ಉಂಟಾಯಿತು. ಧ್ರುವ ಅವರನ್ನು ನೋಡಿ ಕೇಕೆ ಹಾಕಿದ ಅಭಿಮಾನಿಗಳು ಸಂತಸಗೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296