ಮಕ್ಕಳಲ್ಲಿ ಹೆಚ್ಚುತ್ತಿರುವ ಮಧುಮೇಹವನ್ನು ನಿಯಂತ್ರಿಸುವ ಉದ್ದೇಶದಿಂದ, ವೈದ್ಯರು ರೋಗದ ಕಾರಣಗಳು ಮತ್ತು ಅದನ್ನು ತ್ವರಿತವಾಗಿ ನಿಭಾಯಿಸುವ ವಿಧಾನಗಳ ಬಗ್ಗೆ ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ಅರಿವು ಮೂಡಿಸಲು ಮುಂದಾಗಿದ್ದಾರೆ.
ಕರ್ನಾಟಕ ರಿಸರ್ಚ್ ಸೊಸೈಟಿ ಫಾರ್ ದಿ ಸ್ಟಡಿ ಆಫ್ ಡಯಾಬಿಟಿಸ್ ಇನ್ ಇಂಡಿಯಾ ಅಧ್ಯಕ್ಷ ಡಾ. ಮನೋಹರ್ ನಾಗೇಶಪ್ಪ, ವಿಶೇಷವಾಗಿ ಸಾಂಕ್ರಾಮಿಕ ಯುಗದಲ್ಲಿ ಜೀವನಶೈಲಿಯಲ್ಲಿನ ಬದಲಾವಣೆಯಿಂದಾಗಿ ಮಕ್ಕಳಲ್ಲಿ ಮಧುಮೇಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದಿದ್ದಾರೆ.


