nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026
    Facebook Twitter Instagram
    ಟ್ರೆಂಡಿಂಗ್
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    • ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಮಾನಿಕೆರೆ ಕೋಡಿ ನೀರಿನಿಂದ ದಿಬ್ಬೂರು ಜಲಾವೃತ: ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ
    ತುಮಕೂರು October 25, 2024

    ಅಮಾನಿಕೆರೆ ಕೋಡಿ ನೀರಿನಿಂದ ದಿಬ್ಬೂರು ಜಲಾವೃತ: ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ

    By adminOctober 25, 2024No Comments2 Mins Read
    amanikere

    ತುಮಕೂರು: ನಿರಂತರ ಮಳೆಯಿಂದಾಗಿ ನಗರದ ಅಮಾನಿಕೆರೆ ಕೋಡಿ ನೀರು ನುಗ್ಗಿ ದಿಬ್ಬೂರು ಬಡಾವಣೆಯ ಮನೆ, ಅಂಗಡಿ, ತೋಟಗಳು ಜಲಾವೃತಗೊಂಡಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

    ಕೋಡಿ ನೀರಿನಿಂದ 2 ಮನೆಗಳು ಬಿದ್ದಿದ್ದು, ಹಲವಾರು ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತ–ವ್ಯಸ್ತವಾಗಿರುವುದನ್ನು ಕಂಡ ಜಿಲ್ಲಾಧಿಕಾರಿಗಳು ಕೂಡಲೇ ಜಲಾವೃತವಾಗಿರುವ ಮನೆಗಳ ಕುಟುಂಬದ ಸದಸ್ಯರನ್ನು ಜಿಲ್ಲಾಡಳಿತದ ವತಿಯಿಂದ ದಿಬ್ಬೂರು ಸಮುದಾಯ ಭವನದಲ್ಲಿ ತಾತ್ಕಾಲಿಕವಾಗಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಕೂಡಲೇ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಅವರಿಗೆ ನಿರ್ದೇಶನ ನೀಡಿದರು.


    Provided by
    Provided by

    ಸ್ಥಳದಲ್ಲಿದ್ದ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಕಳೆದ 2019 ಹಾಗೂ 2022ರಲ್ಲಿ ಅಮಾನಿಕೆರೆ ಕೋಡಿ ನೀರು ನುಗ್ಗಿ ಇಲ್ಲಿನ ನಿವಾಸಿಗಳ ಜೀವನ ಅಸ್ತ–ವ್ಯಸ್ತವಾಗಿತ್ತು. ಇದೇ ಬಡಾವಣೆಯ ಸರ್ವೇ ನಂಬರ್ 207 ಹಾಗೂ 208ರಲ್ಲಿರುವ ರಾಜಗಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲದ ಕಾರಣ ದಿಬ್ಬೂರು ಬಡಾವಣೆ ಜಲಾವೃತಗೊಂಡಿದೆ. ಅಲ್ಲದೆ ನಗರದಲ್ಲಿರುವ ಮುಖ್ಯ ರಾಜಗಾಲುವೆಗಳು ಒತ್ತುವರಿಯಾಗಿರುವುದರಿಂದಲೂ ಜನರು ಇಂತಹ ಸಮಸ್ಯೆಯನ್ನು ಎದುರಿಸುವ ಸಂದರ್ಭ ಎದುರಾಗಿದೆ. ಈ ನಿಟ್ಟಿನಲ್ಲಿ ರಾಜಗಾಲುವೆ ಒತ್ತುವರಿಯನ್ನು ತೆರವುಗೊಳಿಸಬೇಕೆಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

    ನಂತರ ಹರಿಯುತ್ತಿದ್ದ ಮಳೆ ನೀರಿನಲ್ಲಿಯೇ ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳ ತಂಡ ಜಲಾವೃತಗೊಂಡಿದ್ದ ಮನೆ, ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿ ಕಂದಾಯ ಹಾಗೂ ಪಾಲಿಕೆ ವತಿಯಿಂದ ಕೂಡಲೇ ಜಂಟಿ ಸಮೀಕ್ಷೆ ನಡೆಸಿ ಒತ್ತುವರಿಯಾಗಿರುವ ರಾಜಗಾಲುವೆಗಳನ್ನು ತೆರವುಗೊಳಿಸಬೇಕು. ರಾಜಗಾಲುವೆಗಳಲ್ಲಿರುವ ಕಸ–ಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸುವ ಮೂಲಕ ಮಳೆನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕಲ್ಲದೆ, ಮಳೆಯಿಂದ ಯಾವುದೇ ಜೀವಹಾನಿಯಾಗದಂತೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತುಮಕೂರಿನ ದೇವರಾಯಪಟ್ಟಣ ಕೆರೆ, ಅಕ್ಕ–ತಂಗಿ ಕೆರೆ, ಸತ್ಯಮಂಗಲ ಕೆರೆ ಸೇರಿದಂತೆ ವಿವಿಧ ಕೆರೆಗಳ ಕೋಡಿ ನೀರಿನಿಂದ ನಗರದ ಅಮಾನಿಕೆರೆ ತುಂಬಿ ಕೋಡಿ ಬಿದ್ದಿದ್ದು, ಹೆಚ್ಚುವರಿ ನೀರು ದಿಬ್ಬೂರು ಮಾರ್ಗವಾಗಿ ಭೀಮಸಂದ್ರ ಕೆರೆಯನ್ನು ತಲುಪುತ್ತದೆ. ಆದರೆ ಮಳೆನೀರಿನ ಪ್ರಮಾಣ ಹೆಚ್ಚಿರುವುದರಿಂದ ಬಡಾವಣೆಗೆ ನೀರು ನುಗ್ಗಿದೆ. ಮಹಾನಗರ ಪಾಲಿಕೆ ವತಿಯಿಂದ ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ರಾಜ ಕಾಲುವೆ ತೆರೆವು ಕಾರ್ಯ ಕೈಗೊಳ್ಳಲಾಗಿದೆ. ಯಾವುದೇ ಅವಘಡಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಡಾವಣೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ. 50ರಷ್ಟು ಹೆಚ್ಚುವರಿ ಮಳೆಯಾಗಿದ್ದು, ಮುಂದುವರೆಯುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶದಲ್ಲಿರುವ ಜನರು ಸುರಕ್ಷಿತ ಸ್ಥಳ, ಜಿಲ್ಲಾಡಳಿತದಿಂದ ತಾತ್ಕಾಲಿಕವಾಗಿ ತೆರೆದಿರುವ ಗಂಜಿ ಕೇಂದ್ರಗಳಿಗೆ ತೆರಳಬೇಕೆಂದು ಮನವಿ ಮಾಡಿದರು.

    ಮಹಾನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮಾತನಾಡಿ, ಜಿಲ್ಲೆಯಲ್ಲಿ ಮಳೆ ಆರಂಭಕ್ಕೂ ಮುನ್ನವೇ ರಾಜ ಕಾಲುವೆಗಳ ತೆರವು ಕಾರ್ಯ ಕೈಗೊಳ್ಳಲಾಗಿತ್ತು, ಕೆಲವು ಪ್ರದೇಶಗಳಲ್ಲಿ ರಾಜ ಕಾಲುವೆ ಒತ್ತುವರಿಯಾಗಿದ್ದು, ಜಿಲ್ಲಾಡಳಿತ ಮತ್ತು ಪಾಲಿಕೆಯಿಂದ ಜಂಟಿ ಸರ್ವೇ ಕಾರ್ಯ ಕೈಗೊಂಡು ರಾಜ ಕಾಲುವೆ ತೆರವಿಗೆ ಕ್ರಮ ಕೈಗೊಳ್ಳಲಾಗುವುದು. ಮಳೆಯಿಂದ ನಿರಾಶ್ರಿತರಾದವರಿಗೆ ಗಂಜಿ ಕೇಂದ್ರದಲ್ಲಿ ಹಾಸಿಗೆ-ಹೊದಿಕೆ, ಕುಡಿಯುವ ನೀರು, ಆಹಾರ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
    ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಭೂದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕ ಸಣ್ಣಯ್ಯ, ಪಾಲಿಕೆ ಇಂಜಿನಿಯರ್ ವಿನಯ್, ಅಗ್ನಿಶಾಮಕ, ಕಂದಾಯ ಹಾಗೂ ಪಾಲಿಕೆ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರ 1,000 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಆಯೋಜಿಸಿರುವ ‘ಸಾಧನಾ ಸಮಾವೇಶ’ದ ವಿರುದ್ಧ ಮಾಜಿ ಮುಖ್ಯಮಂತ್ರಿ…

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.