nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ

    November 16, 2026

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!

    November 16, 2026
    Facebook Twitter Instagram
    ಟ್ರೆಂಡಿಂಗ್
    • ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
    • ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
    • ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
    • ತಿಪಟೂರು: ಹಾಲ್ಕುರಿಕೆ ರಸ್ತೆ ಭಾಗದಲ್ಲಿ ನ.16ರಿಂದ ಡಿ.5ರವರೆಗೆ ವಿದ್ಯುತ್ ವ್ಯತ್ಯಯ
    • ಚಳಿಗಾಲದಲ್ಲಿ ಪದೇ ಪದೇ ಹಸಿವಾಗುವುದೇಕೆ? ಸಿಹಿ, ಖಾರ ತಿನ್ನುವ ಬಯಕೆಯ ಹಿಂದಿದೆ ಈ ಕಾರಣಗಳು!
    • ಬೀದರ್ ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 14 ಕೆಜಿಗೂ ಅಧಿಕ ಗಾಂಜಾ ವಶ, ಓರ್ವ ಆರೋಪಿ ಬಂಧನ
    • ಕೆಕೆಆರ್ ಟಿಸಿ ನಿರ್ದೇಶಕ ಸ್ಥಾನಕ್ಕೆ ಚಂದ್ರಕಾಂತ ಹಿಪ್ಪಳಗಾಂವ ರಾಜೀನಾಮೆ ಘೋಷಣೆ
    • ಬಾಕಿ ಸಂಬಳ ಕೇಳಿದ್ದಕ್ಕೆ ಚಾಲಕನ ಅಪಹರಣ, ಮಾರಣಾಂತಿಕ ಹಲ್ಲೆ: ಮಾಲೀಕ ಸೇರಿ ಮೂವರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ
    ರಾಜ್ಯ ಸುದ್ದಿ October 8, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ

    By Ganesh TumkuruOctober 8, 2026No Comments2 Mins Read
    h d kumara swamy

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಡಿ.ಕೆ. ಶಿವಕುಮಾರ್ ಅವರು ಸ್ಟಿಂಗ್ ಆಪರೇಷನ್ ನಡೆಸಿದ್ದರು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.ಬೆಂಗಳೂರಿನ ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ದೀರ್ಘಕಾಲ ರಾಜ್ಯವನ್ನು ಮುನ್ನಡೆಸಿದ ಹಿರಿಯ ನಾಯಕರು. ಅಹಿಂದ ವರ್ಗದ ಪ್ರಮುಖ ನಾಯಕರಾಗಿರುವ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅಂತಹ ನಾಯಕರು ಸ್ಟಿಂಗ್ ಆಪರೇಷನ್‌ಗೆ ಬಲಿಯಾಗಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಪರಿಸ್ಥಿತಿ ಎದುರಾಯಿತು ಎಂದು ಆರೋಪಿಸಿದರು.

    ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಂಪುಟದ ಕೆಲವು ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರ ವಿರುದ್ಧ ನಡೆದಿತ್ತೆಂದು ತಾವು ಆರೋಪಿಸುತ್ತಿರುವ ಅದೇ ರೀತಿಯ ತಂತ್ರವನ್ನು ಇದೀಗ ಸಚಿವರನ್ನು ನಿಯಂತ್ರಿಸಲು ಬಳಸಲಾಗುತ್ತಿದೆ ಎಂದು ದೂರಿದರು.

    ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಅವರಿಗೆ ಸ್ಟಿಂಗ್ ಆಪರೇಷನ್ ವಿಚಾರ ತಿಳಿಸಿ ರಾಜೀನಾಮೆ ಪಡೆಯಲಾಯಿತು ಎಂದು ಕುಮಾರಸ್ವಾಮಿ ಆರೋಪಿಸಿದರು. ಕಾಂಗ್ರೆಸ್ ಹೈಕಮಾಂಡ್ ಹಾಗೂ ಕೆಲವು ಮಾಧ್ಯಮ ಸಂಸ್ಥೆಗಳು ಈ ಪ್ರಕ್ರಿಯೆಯಲ್ಲಿ ಶಾಮೀಲಾಗಿದ್ದವು ಎಂಬ ಗಂಭೀರ ಆರೋಪವನ್ನೂ ಮಾಡಿದರು.

    ಸಿದ್ದರಾಮಯ್ಯ ಅವರಂತಹ ಹಿರಿಯ ನಾಯಕನಿಂದ ರಾಜೀನಾಮೆ ಪಡೆದ ರೀತಿ ಸರಿಯಲ್ಲ. ಅವರ ವಿರುದ್ಧ ವ್ಯವಸ್ಥಿತ ಸಂಚು ನಡೆದಿದೆ. ಇದರ ಹಿಂದೆ ಯಾರು ಇದ್ದಾರೆ, ಯಾವ ಮಾಧ್ಯಮ ಸಂಸ್ಥೆ ಪಾತ್ರ ವಹಿಸಿದೆ ಎಂಬ ಬಗ್ಗೆ ತಮ್ಮ ಬಳಿ ಮಾಹಿತಿ ಇದೆ ಎಂದು ಕುಮಾರಸ್ವಾಮಿ ಹೇಳಿದರು.

    ತಮ್ಮೊಂದಿಗೆ ಕೆಲ ಕಾಂಗ್ರೆಸ್ ನಾಯಕರು ಈ ವಿಚಾರ ಹಂಚಿಕೊಂಡಿದ್ದಾರೆ ಎಂದು ಹೇಳಿದ ಕುಮಾರಸ್ವಾಮಿ, ಇದೇ ರೀತಿಯ ಪರಿಸ್ಥಿತಿ ತಮಗೂ ಎದುರಾಗಬಹುದು ಎಂಬ ಆತಂಕದಿಂದ ಸಚಿವರು ಎಚ್ಚರಿಕೆಯಿಂದ ಇರಬೇಕು ಎಂದು ಸಂಪುಟ ಸಭೆಯಲ್ಲಿ ಸೂಚಿಸಲಾಗಿದೆ ಎಂದರು.

    ರಮೇಶ್ ಜಾರಕಿಹೊಳಿ, ಕೆ.ಎನ್. ರಾಜಣ್ಣ ಸೇರಿದಂತೆ ಕೆಲವರ ಪ್ರಕರಣಗಳಲ್ಲೂ ಸ್ಟಿಂಗ್ ಆಪರೇಷನ್ ನಡೆದಿರುವುದನ್ನು ಉಲ್ಲೇಖಿಸಿದ ಅವರು, ಸ್ಟಿಂಗ್ ಆಪರೇಷನ್ ನಡೆಸುವುದರಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಹೆಚ್ಚಿನ ಅನುಭವವಿದೆ ಎಂದು ಆರೋಪಿಸಿದರು.ಸಚಿವರ ಮೇಲೆ ನಿಗಾ ಇಡುವ ಮೂಲಕ ಅವರನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಳ್ಳಲು ಸ್ಟಿಂಗ್ ಆಪರೇಷನ್ ಬಳಸಲಾಗುತ್ತಿದೆ ಎಂದು ಕುಮಾರಸ್ವಾಮಿ ದೂರಿದರು.

    ಹಿಂದೆ ಸಚಿವ ಸಂಪುಟ ಸಭೆಗಳಲ್ಲಿ ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಯುತ್ತಿತ್ತು. ಆದರೆ ಈಗ ಸ್ಟಿಂಗ್ ಆಪರೇಷನ್ ಮತ್ತು ಹನಿಟ್ರ್ಯಾಪ್‌ಗಳಂತಹ ವಿಚಾರಗಳು ಚರ್ಚೆಯಾಗುತ್ತಿರುವುದು ರಾಜ್ಯದ ದುಸ್ಥಿತಿಯನ್ನು ತೋರಿಸುತ್ತದೆ ಎಂದು ಕುಮಾರಸ್ವಾಮಿ ಟೀಕಿಸಿದರು.ತಾವು ಮತ್ತು ತಮ್ಮ ಪಕ್ಷದವರು ಸ್ಟಿಂಗ್ ಆಪರೇಷನ್ ನಡೆಸುತ್ತಿದ್ದಾರೆ ಎಂಬ ಆರೋಪದಲ್ಲಿ ಸತ್ಯವಿದ್ದರೆ ತನಿಖೆ ನಡೆಸಲಿ. ರಾಜ್ಯ ಸರ್ಕಾರದ ಬಳಿ ಎಸ್‌ಐಟಿ ಇದೆ, ತನಿಖೆ ನಡೆಸಲು ಯಾರೂ ತಡೆಯುವುದಿಲ್ಲ ಎಂದು ಹೇಳಿದರು.ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ವಿಧಾನಸಭೆಯಲ್ಲಿ ತಮ್ಮದು ಮಾತ್ರವಲ್ಲದೆ ಇನ್ನೂ ಹಲವು ಜನರ ಸ್ಟಿಂಗ್ ಮಾಡಲಾಗಿದೆ ಎಂದು ಹೇಳಿದ್ದನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಆ ಹೇಳಿಕೆಯ ಬಳಿಕ ಏನಾಯಿತು ಎಂಬುದನ್ನೂ ಪ್ರಶ್ನಿಸಿದರು.

    ದೇವೇಗೌಡರ ಕುಟುಂಬವನ್ನು ಮುಗಿಸಲು ಕೂಡ ಇದೇ ರೀತಿಯ ತಂತ್ರ ರೂಪಿಸಲಾಗಿತ್ತು ಎಂದು ಆರೋಪಿಸಿದ ಅವರು, ಇದೀಗ ತಮ್ಮ ಸಂಪುಟದ ಸಚಿವರನ್ನು ನಿಯಂತ್ರಿಸಲು ಅದೇ ತಂತ್ರ ಬಳಸಲಾಗುತ್ತಿದೆ ಎಂದು ದೂರಿದರು.ಇದೇ ವೇಳೆ, ಕೆಲವು ಸಚಿವರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದುಕೊಂಡಿದ್ದ ವಿಚಾರ ಸೇರಿದಂತೆ ಹಲವು ರಾಜಕೀಯ ಬೆಳವಣಿಗೆಗಳನ್ನೂ ಕುಮಾರಸ್ವಾಮಿ ಪ್ರಸ್ತಾಪಿಸಿದರು.ಕುಮಾರಸ್ವಾಮಿ ಅವರ ಈ ಆರೋಪಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಥವಾ ಕಾಂಗ್ರೆಸ್ ಪಕ್ಷದಿಂದ ಈ ವರದಿ ಸಿದ್ಧಪಡಿಸುವ ವೇಳೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕೆಕೆಆರ್ ಟಿಸಿ ನಿರ್ದೇಶಕ ಸ್ಥಾನಕ್ಕೆ ಚಂದ್ರಕಾಂತ ಹಿಪ್ಪಳಗಾಂವ ರಾಜೀನಾಮೆ ಘೋಷಣೆ

    November 15, 2026

    ಬಾಕಿ ಸಂಬಳ ಕೇಳಿದ್ದಕ್ಕೆ ಚಾಲಕನ ಅಪಹರಣ, ಮಾರಣಾಂತಿಕ ಹಲ್ಲೆ: ಮಾಲೀಕ ಸೇರಿ ಮೂವರ ಬಂಧನ

    November 15, 2026

    ಆಸ್ತಿ ಖರೀದಿದಾರರ ಜೇಬಿಗೆ ಕತ್ತರಿ! ರಾಜ್ಯಾದ್ಯಂತ ಮಾರ್ಗಸೂಚಿ ದರ ಏರಿಕೆಗೆ ಸಿದ್ಧತೆ

    November 15, 2026

    Leave A Reply Cancel Reply

    Our Picks

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026

    ಡಬ್ಬಿಂಗ್ ಲೋಕದಲ್ಲಿ ಹೊಸ ಕ್ರಾಂತಿ; ‘ರಾಮಾಯಣ’ ಚಿತ್ರದಲ್ಲಿ ಬ್ರಹ್ಮ ಎಐ ಮ್ಯಾಜಿಕ್! ಏನಿದರ ವಿಶೇಷತೆ ?

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ

    November 16, 2026

    ತುಮಕೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ U-14, U–17 ಹಾಗೂ U–19 ವಿಭಾಗಗಳ ರೈಫಲ್ ಶೂಟಿಂಗ್…

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!

    November 16, 2026

    ತಿಪಟೂರು: ಹಾಲ್ಕುರಿಕೆ ರಸ್ತೆ ಭಾಗದಲ್ಲಿ ನ.16ರಿಂದ ಡಿ.5ರವರೆಗೆ ವಿದ್ಯುತ್ ವ್ಯತ್ಯಯ

    November 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.