2024ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈಗಾಗಲೇ ಆಖಾಡಕ್ಕೆ ಇಳಿದಿರುವ ಎನ್ ಡಿಎ, ತಮ್ಮ ಮೈತ್ರಿ ಪಕ್ಷಗಳ ಜೊತೆಗೆ ಮಾತುಕತೆ ನಡೆಸಲು ಇದೇ ತಿಂಗಳ 18 ರಂದು ದೆಹಲಿಯಲ್ಲಿ ಸಭೆ ಸೇರಲಿದ್ದು, ಆ ಸಭೆಗೆ ರಾಜ್ಯದ ಜೆಡಿಎಸ್ ನ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ಅವರು ಕೂಡ ತೆರಳಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಈಗಾಗಲೇ ರಾಜ್ಯದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮುಕ್ತಾಯವಾಗಿದ್ದು, ಬಿಜೆಪಿ 66 ಕ್ಷೇತ್ರಗಳಲ್ಲಿ ಜಯಗಳಿಸಿದ್ರೆ, ಇತ್ತ ಜೆಡಿಎಸ್ ಕೇವಲ 19 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಇದೀಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿರುವ ಕಾರಣ, ಈ ತಿಂಗಳ 18 ರಂದು ನಡೆಯುವ ಸಭೆಗೆ ಕುಮಾರಸ್ವಾಮಿ ತೆರಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


