2016 ರ ಜೂನ್ 15 ರಂದು ಧಾರವಾಡದಲ್ಲಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿರೋ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲೆಗೆ ಬರಲು ಅವಕಾಶ ಇಲ್ಲ ಎಂದು ಈ ಹಿಂದೆಯೇ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು.
ಕೊಲೆ ಪ್ರಕರಣದಲ್ಲಿ ಆರೋಪಿಯಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಈ ಹಿಂದೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿತ್ತು. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಕಂಡರೂ ಶಾಸಕನಿಗೆ ಧಾರವಾಡ ಜಿಲ್ಲೆ ಪ್ರವೇಶದ ಮೇಲಿರುವ ನಿರ್ಬಂಧ ತೆರವು ಮಾಡಿಲ್ಲ.
ಈಗ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಪ್ರವೇಶ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನಾಶ ಆರೋಪಗಳಿರುವ ಹಿನ್ನೆಲೆಯಲ್ಲಿ ಮತ್ತೆ ಜಿಲ್ಲೆಯ ಪ್ರವೇಶವನ್ನು ನ್ಯಾಯಾಲಯ ನಿರಾಕರಿಸಿದೆ. ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಕೋರ್ಟ್ ರದ್ದುಪಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


