nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!

    July 12, 2026

    ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ

    July 12, 2026

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026
    Facebook Twitter Instagram
    ಟ್ರೆಂಡಿಂಗ್
    • ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
    • ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ನರೇಂದ್ರ ಮೋದಿ ಸಾಲ ಮಾಡಿಲ್ಲವೇ?: ಡಿ.ಕೆ.ಶಿವಕುಮಾರ್ ಪ್ರಶ್ನೆ
    ರಾಜ್ಯ ಸುದ್ದಿ April 3, 2026

    ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ನರೇಂದ್ರ ಮೋದಿ ಸಾಲ ಮಾಡಿಲ್ಲವೇ?: ಡಿ.ಕೆ.ಶಿವಕುಮಾರ್ ಪ್ರಶ್ನೆ

    By adminApril 3, 2026No Comments1 Min Read
    dk shivakumar

    ದಾವಣಗೆರೆ: ಕೇಂದ್ರ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರ ಮೇಲೆ ಹೇರಿರುವ ಆರ್ಥಿಕ ಹೊರೆಯನ್ನು ತಗ್ಗಿಸಲು ರಾಜ್ಯ ಸರ್ಕಾರ ಸಾಲ ಮಾಡಿದೆ. ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಸಾಲ ಮಾಡಿಲ್ಲವೇ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

    ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ಬೆಲೆ ಏರಿಕೆಯ ಬಿಸಿಯಿಂದ ಜನರನ್ನು ರಕ್ಷಿಸಲು ರಾಜ್ಯ ಸರ್ಕಾರ ‘ಗ್ಯಾರಂಟಿ’ ಯೋಜನೆಗಳ ಮೂಲಕ ಜನರ ಕೈಗೆ ಹಣ ನೀಡುತ್ತಿದೆ. ಕೇಂದ್ರಕ್ಕೆ ಜನರ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಜನರ ಬ್ಯಾಂಕ್ ಖಾತೆಗಳಿಗೆ ತಿಂಗಳಿಗೆ ₹10,000 ಆರ್ಥಿಕ ನೆರವು ನೀಡಲಿ ಎಂದು ಸವಾಲು ಹಾಕಿದರು.

    ಬಿಜೆಪಿ ಕೇವಲ ಖಾಲಿ ಮಾತುಗಳ ಮೂಲಕ ಜನರನ್ನು ಮರಳು ಮಾಡುತ್ತಿದೆ. ಅಯೋಧ್ಯೆಯಿಂದ ತಂದ ಅಕ್ಷತೆಯ ಬಗ್ಗೆ ಪ್ರಸ್ತಾಪಿಸಿದ ಅವರು, ಅಕ್ಷತೆಯನ್ನು ಮನೆಮನೆಗೆ ತಲುಪಿಸಿದ ರೀತಿಯಲ್ಲೇ ಎಲ್‌ ಪಿಜಿ ಸಿಲಿಂಡರ್‌ ಗಳನ್ನು ಏಕೆ ಕಡಿಮೆ ದರದಲ್ಲಿ ಪೂರೈಸಬಾರದು ಎಂದು ಪ್ರಶ್ನಿಸಿದರು.

    ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನೇತೃತ್ವದಲ್ಲಿ ಒಗ್ಗಟ್ಟಿನಿಂದ ಸಾಗುತ್ತಿದೆ. ಉಪಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಮತ್ತು ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ನಾವು ಜಾತಿ, ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡದೆ, ನೀತಿಗಳ ಮೇಲೆ ರಾಜಕಾರಣ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

    ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ದಾವಣಗೆರೆಯಲ್ಲಿ ತಡರಾತ್ರಿಯವರೆಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ. ಮುಸ್ಲಿಂ ಮುಖಂಡರ ಮನೆಗಳಿಗೆ ಭೇಟಿ ನೀಡಿ ಸಮುದಾಯದ ವಿಶ್ವಾಸ ಪಡೆಯುವ ಪ್ರಯತ್ನ ನಡೆಸಿದ್ದಾರೆ.

    ರಾತ್ರಿ ಬಹಿರಂಗ ಸಭೆಯ ನಂತರ ಮಳೆ ಬಂದಿದ್ದು ಶುಭ ಸೂಚನೆ ಎಂದು ಬಣ್ಣಿಸಿದ ಡಿ.ಕೆ.ಶಿವಕುಮಾರ್, ಚುನಾವಣಾ ಪ್ರಚಾರ ಕಾರ್ಯಗಳು ಅತ್ಯಂತ ಚುರುಕಾಗಿ ನಡೆಯುತ್ತಿವೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!

    July 12, 2026

    ತುಮಕೂರು: ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಚೆಂಪುಗಾನಹಳ್ಳಿ ಗ್ರಾಮದಲ್ಲಿ ಸುಮಾರು ಮೂರು ದಿನಗಳ ಕಾಲ ಗ್ರಾಮ ದೇವತೆ ಮಾರಮ್ಮ…

    ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ

    July 12, 2026

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.