ಬೆಂಗಳೂರು: ಕರ್ನಾಟಕ ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದಾಗಿ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಬೆಲೆ ಏರಿಕೆ ಬರೆ ಮತ್ತೆ ಜನರನ್ನು ಕಂಗಾಲು ಮಾಡಿದೆ.
ಡೀಸೆಲ್ ಬೆಲೆ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಾಗಲಿದೆ. ಈ ಹಿಂದೆ ಶೇ 18.44 ರಷ್ಟು ಇದ್ದ ತೆರಿಗೆ, ಇದೀಗ ಶೇ 21.17ಕ್ಕೆ ಏರಿಕೆಯಾಗಿದೆ.
ಬೆಂಗಳೂರಲ್ಲಿ ಸದ್ಯ ಡಿಸೇಲ್ 88.99 ರೂ. ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಡೀಸೆಲ್ ಬೆಲೆ 90 ರೂ. ಆಗಲಿದೆ. ಇತ್ತೀಚೆಗೆ ಹಾಲಿನ ಬೆಲೆ ಏರಿಕೆಯಾಗಿತ್ತು.ಇದರ ಬೆನ್ನಲ್ಲೇ ಇದೀಗ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಬೆಲೆ ಏರಿಕೆ ವಿರುದ್ಧ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4