ಬೆಂಗಳೂರು: ಬಿಜೆಪಿಯೊಳಗಿನ ಆಂತರಿಕ ಕಚ್ಚಾಟದ ಬಗ್ಗೆ ಸಂಸದ ಬಸವರಾಜ ಬೊಮ್ಮಾಯಿ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷದಲ್ಲಿನ ಬಣಗಳು ತಾಳ್ಮೆಯಿಂದ ವರ್ತಿಸಿ, ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಚರ್ಚೆಯ ಮೂಲಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಬೇಕು ಎಂದರು.
ಪಕ್ಷದ ಹೈಕಮಾಂಡ್ ಶೀಘ್ರದಲ್ಲೇ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳತ್ತ ಗಮನ ಹರಿಸಿ, ಎಲ್ಲ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಇತರ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಎರಡೂ ಕಡೆಯ ಸದಸ್ಯರು ತಾಳ್ಮೆಯಿಂದ ವರ್ತಿಸಬೇಕು ಮತ್ತು ಚರ್ಚೆಯ ಮೂಲಕ ತಮ್ಮ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಬೇಕು. ಇದು ಸಾಧ್ಯವಾಗದಿದ್ದರೆ, ಅವರೆಲ್ಲರೂ ಕೇಂದ್ರ ನಾಯಕತ್ವದ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx