ಬೆಂಗಳೂರು: ಡಿಜಿಟಲ್ ಅರೆಸ್ಟ್ ಮೂಲಕ ಬೆಂಗಳೂರಿನ ಟೆಕ್ಕಿಯೊಬ್ಬರಿಗೆ 11.8 ಕೋಟಿ ರೂ. ವಂಚಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಬ್ಬಾಳ ಸಮೀಪದ ಜಿಕೆವಿಕೆ ಲೇಔಟ್ ನಿವಾಸಿಯೊಬ್ಬರು ನವೆಂಬರ್ 25 ರಿಂದ ಡಿಸೆಂಬರ್ 15ರ ನಡುವೆ ಹಣ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರೆಂದು ಹೇಳಿಕೊಂಡು ಸೈಬರ್ ವಂಚಕರು ಸುಭಾಷ್ ಅವರಿಗೆ ಕರೆ ಮಾಡಿದ್ದು, ಮುಂಬೈನ ಕೊಲಾಬಾದಲ್ಲಿ ನಿಮ್ಮ ಮೇಲೆ ಪ್ರಕರಣವೊಂದು ದಾಖಲಾಗಿದೆ. ನಿಮ್ಮ ಆಧಾರ್ ಕಾರ್ಡ್ ಬಳಸಿಕೊಂಡು ಹಣ ವರ್ಗಾವಣೆಯಾಗಿದೆ. 6 ಕೋಟಿ ರೂ. ವಂಚನೆಯಾಗಿದೆ. ಈಗ ಕೇಸ್ ಸುಪ್ರೀಂಕೋರ್ಟ್ನಲ್ಲಿ ಇದೆ ಎಂದು ಬೆದರಿಸಿದ್ದರು.
ಬಳಿಕ ಸುಭಾಷ್ ಅವರನ್ನು ಒಂದು ತಿಂಗಳುಗಳ ಕಾಲ ಮನೆಯಲ್ಲಿ ಇರದಂತೆ ಹೇಳಿದ್ದಾರೆ. ಹೀಗಾಗಿ ಅವರು ಯಲಹಂಕದ ಲಾಡ್ಜ್ ವೊಂದರಲ್ಲಿ ಇದ್ದರು. ಸುಭಾಷ್ ಅವರು ಕಳೆದ ಹಲವು ವರ್ಷಗಳಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದರು. ಇದನ್ನೇ ಟಾರ್ಗೆಟ್ ಮಾಡಿದ ಸೈಬರ್ ವಂಚಕರು ಟೆಕ್ಕಿಯಿಂದ ಷೇರುಗಳನ್ನು ಮಾರಾಟ ಮಾಡಿಸಿದ್ದಾರೆ. ಬಳಿಕ ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಈಶಾನ್ಯ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx